May 12, 2024

MALNAD TV

HEART OF COFFEE CITY

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ, ಆರೋಪಿ ಬಂಧನ

1 min read

ಚಿಕ್ಕಮಗಳೂರು.: 12 ವರ್ಷದ ಬಾಲಕಿ ಮೇಲೆ 48 ವರ್ಷದ ವ್ಯಕ್ತಿ ಅತ್ಯಾಚಾರಕ್ಕೆ ಯತ್ನಿಸಿರೋ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದ ಏರಿಯಾವೊಂದರಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿದ 48 ವರ್ಷದ ಬಾಷಾ ಕೂಡ ಅದೇ ಏರಿಯಾದವನು. ಮನೆ ಬಳಿಯ ಅಂಗಡಿ ಹೋಗಿ ಮನೆಗೆ ಬರುತ್ತಿದ್ದ ಬಾಲಕಿಯನ್ನ ತಿಂಡಿ ಕೊಡುತ್ತೇನೆ ಬಾ ಎಂದು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ. ಅಂಗಡಿಗೆ ಹೋಗಿದ್ದ ಬಾಲಕಿ ಮನೆಗೆ ಬರದಿದ್ದಾಗ ಬಾಲಕಿಯನ್ನ ಆಕೆಯ ಚಿಕ್ಕಮ್ಮ ಹುಡುಕಿಕೊಂಡು ಹೊರಟಿದ್ದರು. ಈ ವೇಳೆ, ಮನೆಯೊಂದರಲ್ಲಿ ಬಾಲಕಿ ಕೂಗಾಡುವ ಶಬ್ಧ ಕೇಳಿ ಬಾಲಕಿಯ ಚಿಕ್ಕಮ್ಮ ಹೋಗಿ ಆಕೆಯನ್ನ ರಕ್ಷಿಸಿದ್ದಾರೆ. ಈ ವೇಳೆ ಬಾಲಕಿಯ ಚಿಕ್ಕಮ್ಮ ಆತನ ಮೇಲೆ ಕೂಗಾಡಿದ್ದರಿಂದ ಅಕ್ಕಪಕ್ಕದವರು ಸೇರಿ ಆತನ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಮೊಮ್ಮಗಳ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರಿಂದ ಸ್ಥಳಿಯರು ಆತನಿಗೆ ಥಳಿಸಿದ್ದಾರೆ ಎಂದು ಹೇಳಲಾಗಿದೆ. ಬಳಿಕ ಆತನನ್ನ ಸ್ಥಳಿಯರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ತರೀಕೆರೆ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!