May 2, 2024

MALNAD TV

HEART OF COFFEE CITY

ವಿಶ್ವ ದಾಖಲೆ ಬರೆದು ಚಿನ್ನದ ಪದಕ ತಂದ 14 ತಿಂಗಳ ಮನಸ್ಮಿತಾ

1 min read

ಚಿಕ್ಕಮಗಳೂರು ಜಿಲ್ಲೆಯ ಕಂಬಿಹಳ್ಳಿ ನಿವಾಸಿ ಪ್ರಸ್ತುತ ಬೆಂಗಳೂರಿನ ಆರ್ ಟಿ ನಗರದಲ್ಲಿರುವ ಡಿ.ಎಮ್. ಧನಲಕ್ಷ್ಮಿಕುಮಾರಿ ಮತ್ತು ಹುಲಿಯಪ್ಪಗೌಡ ಕೆ ಅವರ 14 ತಿಂಗಳ ಮಗು ಮನಸ್ಮಿತಾ ಅವರನ್ನು ಕಲಾಂ ವರ್ಲ್ಡ್ ರೆಕಾರ್ಡ್ಸ್ ಅವರು 500 ಪದಗಳು ಮತ್ತು 336 ವಸ್ತುಗಳನ್ನು ಗುರುತಿಸಿದ ವಿಶ್ವದ ಮೊದಲ ಮಗು ಎಂದು ಗುರುತಿಸಿದ್ದಾರೆ ಹಾಗೂ ಅಸಾಧಾರಣ ಗ್ರಹಣ ಶಕ್ತಿ ಮೇಧಾವಿ ಎಂದು ತಮ್ಮ ಪುಸ್ತಕದಲ್ಲಿ ನೊಂದಾಯಿಸಿದ್ದಾರೆ.
ಮನಸ್ಮಿತಾ ಅವರಿಗೆ ಕಳೆದ ಮಾರ್ಚ್ 3ರಂದು ಟೀಚ್ ಆಡಿಟೋರಿಯಂ ಚೆನ್ನೈನಲ್ಲಿ ಕಲಾಂ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಅವರು ವಿಶ್ವ ದಾಖಲೆ ಗೌರವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದ್ದಾರೆ, ಕೇವಲ 14 ತಿಂಗಳಿಗೆ ಈಕೆ ದಾಖಲೆ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಮಗುವಿನ ತಾಯಿ ಡಿ. ಎಮ್. ಧನಲಕ್ಷ್ಮಿಕುಮಾರಿ ಅವರು ಗೃಹಿಣಿಯಾಗಿದ್ದು, ತಂದೆ ಹುಲಿಯಪ್ಪಗೌಡ ಕೆ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತಿ ಹೊಂದಿದ್ದಾರೆ.

 


ಮನಸ್ಮಿತಾ ಅವರು ಕನ್ನಡ ಮತ್ತು ಇಂಗ್ಲಿಷ್ ಅಕ್ಷರಮಾಲೆ, ಕರ್ನಾಟಕದ 8 ಜ್ಞಾನಪೀಠ ಪ್ರಶಸ್ತಿ ವಿಜೇತರು, ರಾಷ್ಟ್ರೀಯ ಪ್ರಾಣಿ, ಹಣ್ಣು, ಪಕ್ಷಿ, ಧ್ವಜ, ಹೂವು, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಸಂಖ್ಯೆಗಳು, 17 ಹಣ್ಣುಗಳು ಮತ್ತು 26 ತರಕಾರಿಗಳು, 25 ಪಕ್ಷಿಗಳು, 27 ಪ್ರಾಣಿಗಳು, 12 ಕೀಟಗಳು ಮತ್ತು 5 ಸರೀಸೃಪಗಳು, 10 ಸ್ವಾತಂತ್ರ್ಯ ಹೋರಾಟಗಾರರು, 11 ಸಮುದ್ರ ಜೀವಿಗಳು, 7 ದೇಶದ ಧ್ವಜಗಳು, ಭಾರತದಲ್ಲಿನ 7 ಐತಿಹಾಸಿಕ ಸ್ಥಳ, 10 ಹೂವುಗಳು, 7 ಭಾರತೀಯ ಕರೆನ್ಸಿ, 10 ಬಣ್ಣಗಳು ಮತ್ತು 14 ಆಕಾರಗಳು, 7 ಆಟಿಕೆಗಳ ಹೆಸರುಗಳು, 11 ಸಸ್ಯ ಮತ್ತು 5 ಎಲೆಗಳು, 19 ದೇಹದ ಭಾಗಗಳು 7 ವಿಜ್ಞಾನಿಗಳು, 336 ವಿವಿಧ ವಸ್ತುಗಳು, ಒಟ್ಟು 500 ಪದಗಳನ್ನು ಗುರುತಿಸುತ್ತಾರೆ. ಈ ಹಿನ್ನೆಲೆಯಲ್ಲಿ ಕಲಾಂ ವರ್ಲ್ಡ್ ರೆಕಾರ್ಡ್ಸ್‌ ಸಂಸ್ಥೆ ಮನಸ್ಮಿತಾ ಅವರನ್ನು ಅಸಾಧಾರಣ ಗ್ರಹಣ ಶಕ್ತಿ ಮೇಧಾವಿ ಎಂದು ಗುರುತಿಸಿ ಶ್ಲಾಘಿಸಿದ್ದಾರೆ, ಮಾರ್ಚ್ 3ರಂದು ವಿಶ್ವ ದಾಖಲೆ ಗೌರವ ಸಮಾರಂಭದ ವೇದಿಕೆಯಲ್ಲಿ ಸನ್ಮಾನ ಮಾಡಿ ಗೌರವಿಸಿದ್ದಾರೆ. ಈ ಸಾಧನೆ ಕಲಾಂ ಅವರ ವಿಶ್ವ ದಾಖಲೆಗಳಲ್ಲಿ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!