May 15, 2024

MALNAD TV

HEART OF COFFEE CITY

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರು ಸಚಿವ ಸ್ಥಾನ

1 min read

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಚಿವ ಸಂಪುಟ ಪುರ್ನವಿಂಗ ಡಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರು ಸಚಿವ ಸ್ಥಾನ ಪಡೆದುಕೊಳ್ಳುವ ಮೂಲಕ ಮಲೆನಾಡು ಮತ್ತು ಕಾರವಳಿಯನ್ನು ದೆಹಲಿ ಮಟ್ಟದಲ್ಲಿ ಪ್ರತಿನಿಧಿಸಲಿದ್ದಾರೆ.
2018ರಲ್ಲಿ ನಡೆದ 17ನೇ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಕಣಕ್ಕಿಳಿದಿದ್ದ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿಯೊಂದಿಗೆ ಕಣಕ್ಕಿಳಿದಿದ್ದ ಪ್ರಮೋದ್ ಮಧ್ವಾರಾಜ್ ಅವರನ್ನು ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು.
ಸಂಸದರಾದ ಬಳಿಕ ಮಲೆನಾಡಿನ ಕಾಫಿಬೆಳೆಗಾರರ ಸಮಸ್ಯೆ ಸೇರಿದಂತೆ ಕಾರವಳಿ ಜನತೆಯ ಜ್ವಾಲಂತ ಸಮಸ್ಯೆಗಳನ್ನು ದೆಹಲಿ ಮಟ್ಟಕ್ಕೆ ಕೊಂಡೋಯ್ದು ಪರಿಹಾರ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.
ರಾಜ್ಯ ರಾಜಕಾರಣದಲ್ಲೂ ಸಕ್ರೀಯವಾಗಿರುವ ಅವರು ರಾಜ್ಯ ಬಿಜೆಪಿಯಲ್ಲಿಯೂ ಪಕ್ಷದ ಚಟುವಟಿಕೆಗಳಲ್ಲಿ ಮತ್ತು ಸಂಘಟನೆಯಲ್ಲಿ ಸಕ್ರೀಯವಾಗಿದ್ದರು. ಸದ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವ ಮೂಲಕ ಮಲೆನಾಡು ಮತ್ತು ಕಾರವಳಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಸಂಸದೆ ಶೋಭಾ ಕರಂದ್ಲಾಜೆ.

ಸಂಸದೆ ಶೋಭಾ ಕರಂದ್ಲಾಜೆ ಅವರು 23 ಅಕ್ಟೋಬರ್ 1966ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮೋನಪ್ಪಗೌಡ ಮತ್ತು ಪೂವಕ್ಕ ದಂಪತಿಗಳ ಮಗಳಾಗಿ ಜನಿಸಿದರು. ಚಿಕ್ಕ ವಯಸ್ಸಿನಲ್ಲೇ ರಾಜಕಾರಣದ ಬಗ್ಗೆ ಒಲವು ಹೊಂದಿದ್ದ ಅವರು, ರಾಷ್ಟ್ರೀಯ ಸ್ವಯಂ ಸೇವಾ ಸಂಘದಲ್ಲಿ ಸಕ್ರೀಯರಾಗಿದ್ದರು.
2004ರಲ್ಲಿ ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದರು. 2008 ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಸ್ಫರ್ಧಿಸಿ ಗೆಲುವು ಸಾಧಿಸಿದರು. ಅಂದಿನ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆಯಾಗಿ ಕಾರ್ಯನಿರ್ವಹಿಸಿದರು.
2014ರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಾಸಭೆ ಚುನಾವಣೆಗೆ ಸ್ಫರ್ಧಿಸಿ 1.81 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದರು. ಮತ್ತೇ 2018ರಲ್ಲಿ ನಡೆದ 17ನೇ ಲೋಕಾಸಭಾ ಚುನಾವಣೆಯಲ್ಲಿ ಎರಡನೇ ಬಾರೀ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಫರ್ಧಿಸಿ ತಮ್ಮ ಎರುರಾಳಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರನ್ನು ಸೋಲಿಸಿ ಎರಡನೇ ಬಾರೀ ಸಂಸದರಾಗಿ ಆಯ್ಕೆಯಾದರು.
ಸದ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಚಿವ ಸಂಪುಟದಲ್ಲಿ ಸ್ಥಾನಗಳಿದ್ದು, ಬುಧ ವಾರ ಸಂಜೆ 6ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಮಾಣವಚನ ಸ್ವೀಕರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಚಿವ ಸಂಪುಟ ಸೇರಲಿದ್ದು, ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.

ರಮೇಶ್ ಜಾರಕಿಹೋಳಿಗೆ ಮತ್ತೇ ಸಚಿವ ಸ್ಥಾನ…!?

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!