August 5, 2021

MALNAD TV |

HEART OF COFFEE CITY

Featured Video Play Icon

The opposition of the Veerashaiva Maha Sabha to bring down BSY as chief minister

ಬಿ.ಎಸ್.ವೈ ರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ವೀರಶೈವ ಮಹಾ ಸಭಾದ ವಿರೋಧ

ಚಿಕ್ಕಮಗಳೂರು : ಮುಖ್ಯಮಂತ್ರಿ ಯಡಿಯೂರಪ್ಪನವರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿ ಮುಂದಿನ ದಿನಗಳಲ್ಲಿ ಗಂಭೀರವಾದ ಪರಿಣಾಮವನ್ನ ಎದುರಿಸಬೇಕಾಗುತ್ತದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ವೀರಶೈವ ಲಿಂಗಾಯಿತ ಸಮಾಜದ ಮುಖಂಡರುಗಳು ಬಿಜೆಪಿಗೆ ಎಚ್ಚರಿಸಿದ್ದಾರೆ. ಯಡಿಯೂರಪ್ಪನವರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಹುನ್ನಾರ ನಡೆಯುತ್ತಿದೆ. ಇದನ್ನ ವೀರಶೈವ ಸಮಾಜ ಖಂಡಿಸುತ್ತದೆ. ಬಿಎಸ್‍ವೈ ಅವರನ್ನು ಸಿ.ಎಂ. ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿ ಪಕ್ಷ ಮುಂದಿನ ದಿನಗಳಲ್ಲಿ ಹೀನಾಯ ಸ್ಥಿತಿ ತಲುಪಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಯಡಿಯೂರಪ್ಪ 5 ದಶಕಗಳ ಕಾಲ ಜನಪರವಾದ ಹೋರಾಟ ಮಾಡಿ ರಾಜಕೀಯದಲ್ಲಿ ಸೈ ಎನಿಸಿಕೊಂಡಿದ್ದಾರೆ. ದಕ್ಷಿಣ ಭಾರತದಲ್ಲಿ ಹಾಗೂ ರಾಜ್ಯದಲ್ಲಿ ಮೊದಲ ಬಾರಿ ಬಿಜೆಪಿ ಅಧಿಕಾರಕ್ಕೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ 25 ಸಂಸದರನ್ನು ಕಳಿಸಿರುವುದರ ಹಿಂದೆ ಬಿಎಸ್‍ವೈ ಪರಿಶ್ರಮವಿದೆ. ರಾಜ್ಯದಲ್ಲಿ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ಏ ಕಾಂಗಿಯಾಗಿ ತಿಂಗಳುಗಟ್ಟಲೆ ಶ್ರಮಿಸಿದ್ದಾರೆ. ಕೋವಿಡ್‍ನ ಮೊದಲ ಮತ್ತು 2ನೇ ಅಲೆಯ ಕ್ಲೀಷ್ಟ ಪರಿಸ್ಥಿತಿಯನ್ನೂ ಸಮರ್ಥವಾಗಿ ಎದುರಿಸಿದ್ದಾರೆ. ಇಂತಹಾ ನಾಯಕರನ್ನು ಬದಲಿಸುವ ಹುನ್ನಾರ ನಡೆಸುತ್ತಿದ್ದು, ಜಿಲ್ಲೆಯ ವೀರಶೈವ ಸಮುದಾಯ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

error: Content is protected !!