April 29, 2024

MALNAD TV

HEART OF COFFEE CITY

ಜಿಲ್ಲೆಯಲ್ಲಿ 263 ಆಧುನಿಕ ಕ್ಯಾಮರಾ ಅಳವಡಿಕೆ

1 min read

ಚಿಕ್ಕಮಗಳೂರು: ಜಿಲ್ಲಾ ಪೊಲೀಸ್ ಇಲಾಖೆಯು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಜಿಲ್ಲಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚು ಕಂಡು ಬಂದಿರುವ 48 ಸ್ಥಳಗಳಲ್ಲಿ 263 ವಿಶೇಷವಾದ ಆಧುನಿಕ ಕ್ಯಾಮರಗಳನ್ನು ಅಳವಡಿಸಲಾಗಿದೆ.
ನಗರದ ಆಯಕಟ್ಟಿನ ಸ್ಥಳಗಳಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಸಹಕಾರದಿಂದ 40 ಕ್ಯಾಮರಗಳನ್ನು ಅಳವಡಿಸಿಲಾಗಿದ್ದರೇ, ಕಡೂರು ತಾಲೂಕಿನ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳ ಸಹಯೋಗದೊಂದಿಗೆ 223 ಸಿಸಿ ಕ್ಯಾಮರಗಳನ್ನು ಅಳವಡಿಸಲಾಗಿದೆ. ಅಪರಾಧ ಕೃತ್ಯಗಳ ಪತ್ತೆ ಹಿನ್ನೆಲೆಯಲ್ಲಿ ಅಳವಡಿಸಲಾಗಿರುವ 263 ಕ್ಯಾಮರಗಳ ಪೈಕಿ 40 ಕ್ಯಾಮರಗಳು ಅತ್ಯಾಧುನಿಕ ಕ್ಯಾಮರಗಳಾಗಿದ್ದು, ಈ ಕ್ಯಾಮರಗಳು ವಾಹನಗಳ ನೋಂದಣಿ ಸಂಖ್ಯೆ ದಾಖಲು ಮಾಡುವ ತಂತ್ರಜ್ಞಾನ, ವಾಹನ ಸವಾರರು, ವ್ಯಕ್ತಿಗಳ ಮುಖ ಚಹರೆ ಪತ್ತೆ ಹಚ್ಚುವಂತಹ ತಂತ್ರಜ್ಞಾನ ಹೊಂದಿದ್ದು, ರಾತ್ರಿ ವೇಳೆಯೂ ದೃಶ್ಯಗಳನ್ನು ಸೆರೆ ಹಿಡಿಯುವ ಕ್ಯಾಮರಗಳಾಗಿವೆ. ಇದರಿಂದ ಅಪರಾಧ ಪ್ರಕರಣಗಳನ್ನು ಶೀಘ್ರವಾಗಿ ಪತ್ತೆ ಹಚ್ಚಲು ಸಾಧ್ಯವಾಗಲಿವೆ.
ಜಿಲ್ಲೆಯ ಕಡೂರು, ಸಿಂಗಟಗೆರೆ, ಪಂಚನಹಳ್ಳಿ, ಸಖರಾಯಪಟ್ಟಣ, ಯಗಟಿ ಪೊಲೀಸ್ ಠಾಣೆಗಳ ವ್ಯಾಪ್ತಿಯ ದೇವಾಲಯಗಳಲ್ಲಿ ಇಂತಹ ಕ್ಯಾಮರಗಳನ್ನು ಹೆಚ್ಚಾಗಿ ಅಳವಡಿಸಲಾಗಿದ್ದು, ಈ ಕ್ಯಾಮರಗಳು ಅಲರಾಮ್ ಮೂಲಕ ಎಚ್ಚರಿಕೆ ನೀಡುವ ತಂತ್ರಜ್ಞಾನ ಹೊಂದಿವೆ.

ಜಿಲ್ಲಾದ್ಯಂತ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಸೈನ್ ಇನ್ ಸೆಕ್ಯೂರಿಟಿ ಎಂಬ ಕುಂದಾಪುರ ಮೂಲದ ಸಂಸ್ಥೆಯೊಂದರ ಸಹಕಾರದೊಂದಿಗೆ ಸೇಫ್ ಚಿಕ್ಕಮಗಳೂರು ಪ್ರಾಜೆಕ್ಟ್‍ನ್ನೂ ಪ್ರಾರಂಭಿಸಿದ್ದು, ಈ ಸಂಬಂಧ ಚಿಕ್ಕಮಗಳೂರು, ಮೂಡಿಗೆರೆ ತಾಲೂಕಿನಾದ್ಯಂತ ಪೊಲೀಸ್ ಇಲಾಖೆ ಬ್ಯಾಂಕ್, ಖಾಸಗಿ ಹಣಕಾಸು ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು ಕೈಗಾರಿಕೆ, ಆಭರಣದ ಅಂಗಡಿಗಳು, ಉದ್ದಿಮೆಗಳ ಮುಖ್ಯಸ್ಥರ ಸಭೆ ನಡೆಸುತ್ತಿದೆ. ಇಂತಹ ಸಂಸ್ಥೆಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಗಳನ್ನು ರಾತ್ರಿ ವೇಳೆ ಸೈನ್ ಇನ್ ಸೆಕ್ಯುರಿಟಿ ಮೂಲಕ ಪೊಲೀಸ್ ಇಲಾಖೆ ಪರಿಶೀಲನೆ ನಡೆಸಿ ಯಾವುದೇ ರೀತಿಯ ಅಪರಾಧ, ಅವಘಡಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಅಪರಾಧಗಳನ್ನು ತಡೆಗಟ್ಟಲು ಯೋಜನೆ ರೂಪಿಸಲಾಗಿದೆ ಎಂದರು.
ಈ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ವ್ಯಾಪ್ತಿಗೆ ವಿವಿಧ ಸಂಘ ಸಂಸ್ಥೆಗಳು, ಉದ್ದಿಮೆದಾರರು, ಆಭರಣದ ಅಂಗಡಿಗಳು, ಧಾರ್ಮಿಕ ಕೇಂದ್ರಗಳು ಸೇರ್ಪಡೆಗೊಂಡು ಭದ್ರತೆ ಮತ್ತು ಸುರಕ್ಷತೆಯನ್ನು ಹೆಚ್ಚಿಸಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಮನವಿ ಮಾಡಿದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!