ನಾಳೆ 6 ಜನ ನಕ್ಸಲರು ಜಿಲ್ಲಾಡಳಿತದ ಮುಂದೆ ಶರಣಾಗತಿ ಸಾಧ್ಯತೆ ?
1 min read
ನಕ್ಸಲ್ ನಾಯಕ ವಿಕ್ರಂಗೌಡನ ಎನ್ ಕೌಂಟರ್ ನಿಂದ ಕಸಿವಿಸಿಗೊಂಡ ನಕ್ಸಲರು ಮಲೆನಾಡಿನಲ್ಲಿ ತಮ್ಮ ಚಾಪ್ಟರ್ ಕ್ಸೊಸ್ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎನಿಸುತ್ತಿದೆ, ಒಂದೇ ಒಂದು ಎನ್ ಕೌಂಟರ್ ಗೆ ಕಾಡಲ್ಲಿ ಕೆಂಪು ಉಗ್ರರ ಸದ್ದಡಿಗಿದಂತೆ ಕಾಣುತ್ತಿದೆ. ಈ ಮೂಲಕ ಆಲ್ ಮೋಸ್ಟ್ ಕಾಫಿನಾಡ ಕಾಡಲ್ಲಿ ನಕ್ಸಲರ ಯುಗಾಂತ್ಯ ಆಗುವ ಲಕ್ಷಣ ಗೋಚರಿಸುತ್ತಿದೆ.
ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ಜನ ನಕ್ಸಲರು ಶರಣಾಗತಿ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ, ನಕ್ಸಲ್ ಶರಣಾಗತಿಗೆ ದಿನಾಂಕ ಫಿಕ್ಸ್ ಆಗಿದೆ ಯಂತೆ, ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ನಕ್ಸಲರು ಶರಣಾಗತಿ ಸಾಧ್ಯತೆ ಇದ್ದು ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ ಪ್ರಮುಖ ನಕ್ಸಲರು ಶರಣಾಗಲಿದ್ದಾರೆ, ವನಜಾಕ್ಷಿ, ಸುಂದರಿಣ ಮಾರೆಪ್ಪ, ವಸಂತ, ಜೀಶ್ ಶರಣಾಗತಿಯ ಪ್ರಮುಖರಾಗಿದ್ದಾರೆ, ಮಾಜಿ ನಕ್ಸಲ್ ನೂರ್ ಜುಲ್ಫಿಕರ್ ಶ್ರೀಧರ್ ನೇತೃತ್ವದಲ್ಲಿ ಶರಣಾಗತಿ ಪ್ರಕ್ರಿಯೆ ನಡೆಯುತ್ತಿದೆ ಎಂಬ ಮಾಹಿತಿ ಹರಿದಾಡುತ್ತಿದೆ, ಸರ್ಕಾರ ರಚನೆ ಮಾಡಿರುವ ಜಿಲ್ಲಾ ಕಮಟಿ ಮುಂದೆ ಶರಣಾಗತಿ ನಡೆಯಲಿದೆ, ಶಾಂತಿಗಾಗಿ ನಾಗರೀಕ ವೇದಿಕೆಯ ಮಧ್ಯಸ್ಥಿಕೆಯಲ್ಲಿ ನಕ್ಸಲರು ಶರಣಾಗತಿಗೆ ಮುಂದಾಗಿದ್ದಾರೆ,
ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್.ಪಿ.ವಿಕ್ರಮ ಅಮಟೆ ಮುಂದೆ ಶರಣಾಗತಿ ಪ್ರಕ್ರಿಯೆ ನಡೆಯಲಿದೆ.
ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ನಕ್ಸಲರು ಸೆರಂಡರ್ ಗೆ ಆಗಮಿಸಿದ್ದು ಈಗಾಗಲೇ ನಗರಕ್ಕೆ ಆಗಮಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g

