May 10, 2024

MALNAD TV

HEART OF COFFEE CITY

ಚಾರ್ಮಾಡಿ ಘಾಟಿಯಲ್ಲಿ ಪಲ್ಟಿಯಾದ 800 ಕಾರು, ನಾಲ್ವರು ಪ್ರಾಣಾಪಾಯದಿಂದ ಪಾರು

1 min read

ಚಿಕ್ಕಮಗಳೂರು. ಚಾಲಕನ ನಿಯಂತ್ರಣ ತಪ್ಪಿ ಮಾರುತಿ 800 ಕಾರು ಪಲ್ಟಿಯಾದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಆರಂಭದ ದರ್ಬಾರ್ ಹೊಟೇಲ್ ಬಳಿ ಈ ಅವಘಡ ಸಂಭವಿಸಿದೆ. ಮಂಗಳೂರಿನ ಕಕ್ಕಿಂಜೆಯಿಂದ ಮೂಡಿಗೆರೆ ತಾಲೂಕಿನ ಕನ್ನೇಹಳ್ಳಿಗೆ ಬರುತ್ತಿದ್ದ ಕಾರು ದರ್ಬಾರ್ ಹೊಟೇಲ್ ಬಳಿ ಪಲ್ಟಿಯಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದರ್ಬಾರ್ ಹೊಟೇಲ್ ಬಳಿ ಈ ಹಿಂದೆ ಕೂಡ ಸಾಕಷ್ಟು ಅಪಘಾತಗಳು ಸಂಭವಿಸಿರುವುದರಿಂದ ಸ್ಥಳಿಯರು ಇಲ್ಲಿನ ತಿರುವಿನಲ್ಲಿ ರಸ್ತೆ ಅಗಲೀಕರಣ ಮಾಡಬೇಕು. ಜೊತೆಗೆ ಈ ಜಾಗದಲ್ಲಿ ಸೂಚನ ಫಲಕದಲ್ಲಿ ಅಳವಡಿಸಬೇಕೆಂದು ಸ್ಥಳಿಯರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ನಾಳೆ ಆಯುಧ ಪೂಜೆ ಹಿನ್ನೆಲೆ ಮಾರುತಿ ಕಾರನ್ನ ಕಿಕ್ಕಿಂಜೆಯಲ್ಲಿ ರಿಪೇರಿ ಮಾಡಿಸಿಕೊಂಡು ಮೂಡಿಗೆರೆಗೆ ಹಿಂದಿರುಗುವಾಗ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರು ಪಲ್ಟಿಯಾದ ರಭಸಕ್ಕೆ ಕಾರು ಸಂಪೂರ್ಣ ಉಲ್ಟಾ ಬಿದ್ದಿದ್ದು ಕಾರಿನ ನಾಲ್ಕು ಚಕ್ರಗಳು ಆಕಾಶ ನೋಡುತ್ತಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಪಲ್ಟಿಯಾಗಿರುವದನ್ನ ಕಂಡ ಸ್ಥಳಿಯರು ಆಶ್ಚರ್ಯಕ್ಕೀಡಾಗಿದ್ದಾರೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!