May 7, 2024

MALNAD TV

HEART OF COFFEE CITY

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸೀರೆ ದೋತಿ 95 ಸಾವಿರ ನಗದು ವಶ

1 min read

 

ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಜಿಲ್ಲೆಯ ಗಡಿಭಾಗದಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸೀರೆಗಳು, ದೋತಿ ಕೊಪ್ಪದ ಗಡಿಕಲ್ ಹಾಗೂ ತರೀಕೆರೆ ಎಂ.ಎನ್ ಕ್ಯಾಂಪ್ ಚೆಕ್ ಪೋಸ್ಟ್ 95 ಸಾವಿರ ನಗದು ಸೀಜ್ ಮಾಡಲಾಗಿದೆ.

 

 

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಜಿಲ್ಲಾಡಳಿತ ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸಿದೆ. ಜಿಲ್ಲೆಯ ಗಡಿಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಈಗಾಗಲೇ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸಿದೆ. ಇಂದು ಕೊಪ್ಪ ತಾಲೂಕಿನ ಗಡಿಕಲ್ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಒಂದು ಲಕ್ಷದ ಇಪ್ಪತೈದು ಸಾವಿರ ಬೆಲೆ ಬಾಳುವ ನೂರಾರು ಸೀರೆಗಳು ಹಾಗೂ ದೋತಿಗಳನ್ನು ಹಾಗೂ ಅದನ್ನು ತುಂಬಿದ್ದ ವಾಹನವನ್ನು ಎಸ್.ಎಸ್.ಟಿ ತಂಡ ವಶಕ್ಕೆ ಪಡೆದಿದೆ ಇನ್ನೊಂದೆಡೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಂ.ಎನ್ ಕ್ಯಾಂಪ್ ಚೆಕ್ ಪೋಸ್ಟ್ ನಲ್ಲಿ ದಾಖಲೆ ರಹಿತವಾಗಿ ಸ್ಲೂಟಿಯೊಂದರಲ್ಲಿ ಕೊಂಡೊಯ್ಯುತ್ತಿದ್ದ 95 ಸಾವಿರ ರೂ ಹಣವನ್ನು ಸೀಜ್ ಮಾಡಲಾಗಿದೆ. ಈ ಹಣ ಹಾಗೂ ಸೀರೆಗಳು ಯಾವುದೇ ಚುನಾವಣೆ ಅಕ್ರಮಕ್ಕೆ ಸಂಬಂಧಿಸಿಲ್ಲ ಆದರೂ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ದಾಖಲೆ ಸರಿಯಾಗಿ ಇಲ್ಲದ ಕಾರಣ ವಶಕ್ಕೆ ಪಡೆಯಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!