May 4, 2024

MALNAD TV

HEART OF COFFEE CITY

ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು 9ನೇ ತರಗತಿ ವಿದ್ಯಾರ್ಥಿ ಸಾವಿಗೆ ಶರಣು

1 min read

 

ಚಿಕ್ಕಮಗಳೂರು.: 9ನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಾಗ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದ ಖಾಸಗಿ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ. ಮೃತನ 9ನೇ ತರಗತಿಯ 15 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಆದರೆ, ಬಾಲಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶಾಲೆಯ 3ನೇ ಮಹಡಿಯಲ್ಲಿದ್ದ ಹಾಸ್ಟೆಲ್ ನ ಮೇಲ್ಛಾವಣಿಯ ಕಬ್ಬಿಣದ ರಾಡಿಗೆ ಸೀರೆ ಹಾಕಿಕೊಂಡು ನೇಣಿಗೆ ಶರಣಾಗಿದ್ದಾನೆ. ಕಳೆದ ರಾತ್ರಿ ಊಟ ಮಾಡಿ ಸ್ನೇಹತರ ಜೊತೆಯೇ ಮಲಗಿದ್ದ ಶ್ರೀನಿವಾಸ್ ಬೆಳಗಿನ ಜಾವ 5 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಮಲಗಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ತಂದೆ ಸರ್ಕಾರಿ ನೌಕರರಾಗಿದ್ದು. ಕೊಪ್ಪ ತಾಲೂಕಿನಲ್ಲಿ ಕೆಲಸ ಮಾಡುತ್ತಿದ್ದರು. ಶಾಲೆ ಮನೆಯಿಂದ ತುಸು ದೂರದಲ್ಲೇ ಇತ್ತು. ಮೃತ ಬಾಲಕ ನಿತ್ಯ ಓಡಾಕೊಂಡಿದ್ದನು. ಕಳೆದ ಒಂದು ತಿಂಗಳ ಹಿಂದೆ ಮೃತ ಶ್ರೀನಿವಾಸ್ ತಂದೆಗೆ ಕೊಪ್ಪದಿಂದ ಅಜ್ಜಂಪುರಕ್ಕೆ ವರ್ಗಾವಣೆಯಾಗಿತ್ತು. ಹಾಗಾಗಿ, ಮೃತ ಬಾಲಕನನ್ನ ಶಾಲೆಯ ಹಾಸ್ಟೆಲ್ ಬಿಟ್ಟಿದ್ದರು. ಒಂದು ತಿಂಗಳಿನಿಂದ ಶಾಲೆಯ ಹಾಸ್ಟೆಲ್ ನಲ್ಲಿದ್ದ ಶ್ರೀನಿವಾಸ್ ಇಂದು ಬೆಳಗಿನ ಜಾವ ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!