November 1, 2024

MALNAD TV

HEART OF COFFEE CITY

ಭಾರತ ದೇಶವು ಯೋಗ ವಿದ್ಯೆಯಲ್ಲಿ ಪ್ರಪಂಚಕ್ಕೆ ವಿಶ್ವಗುರುವಾಗಿದೆ : ಕು. ಶೋಭಾ ಕರಂದ್ಲಾಜೆ

1 min read

ಚಿಕ್ಕಮಗಳೂರು : ಭಾರತ ದೇಶವು ಯೋಗ ವಿದ್ಯೆಯಲ್ಲಿ ಪ್ರಪಂಚಕ್ಕೆ ವಿಶ್ವಗುರುವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ವತಿಯಿಂದ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ೯ನೇ ಅಂತರ ರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸುಸ್ಥಿರ ಹಾಗೂ ಸದೃಢವಾಗಿ ಇಟ್ಟುಕೊಳ್ಳಲು ಯೋಗ ಸಹಕಾರಿ, ದೇಹ ಹಾಗೂ ಮನಸ್ಸನ್ನು ಸಮತೋಲನದಲ್ಲಿ ಇಟ್ಟುಕೊಳ್ಳಲು ಪ್ರತಿಯೊಬ್ಬರೂ ಪತ್ರಿದಿನ ಯೋಗ ಮಾಡಬೇಕು ಪ್ರಪಂಚದ ಬೇರೆ ಬೇರೆ ದೇಶಗಳಿಂದ ವಿದ್ಯಾರ್ಥಿಗಳು ಯೋಗದ ಅಧ್ಯಯನಕ್ಕೆ ಹಾಗೂ ತರಬೇತಿಗೆ ಭಾರತಕ್ಕೆ ಬಂದು ಯೋಗದ ಅಧ್ಯಯನ ಮಾಡಿ ತರಬೇತಿ ಪಡೆದು ತಮ್ಮ ದೇಶಗಳಲ್ಲಿ ಯೋಗದ ಮಹತ್ವದ ಕುರಿತು ಪ್ರಚಾರ ಮಾಡುತ್ತಿದ್ದಾರೆ ಎಂದ ಅವರು ಯಾವುದೇ ಧರ್ಮ, ಜಾತಿ, ಭಾಷೆ, ವೈಚಾರಿಕತೆ ಬೇರೆ ಬೇರೆ ಇರಬಹುದು. ಯೋಗ ಎಲ್ಲರನ್ನು ಆಕರ್ಷಿಸುತ್ತದೆ. ಆರೋಗ್ಯ ಉತ್ತಮವಾಗಿರಲು ಯೋಗ ಸಹಕಾರಿ ಎಂದರು.
೧೭೦ಕ್ಕೂ ಹೆಚ್ಚು ದೇಶಗಳಲ್ಲಿ ಯೋಗ ಆಚರಣೆಯಲ್ಲಿದೆ ಎಂದರೆ ಅದು ನಮ್ಮ ಹೆಮ್ಮೆ ಮತ್ತು ಕೀರ್ತಿ ನಮ್ಮ ಪ್ರಧಾನ ಮಂತ್ರಿಗಳು ಇಂದು ಅಮೇರಿಕಾದ ನ್ಯೂಯಾರ್ಕಿನಲ್ಲಿ ಯೋಗ ಮಾಡುತ್ತಿದ್ದು, ಪ್ರಪಂಚಕ್ಕೆ ಯೋಗದ ಮಹತ್ವದ ಬಗ್ಗೆ ತಿಳಿಸಲಿದ್ದಾರೆ ಎಂದು ಹೇಳಿದ ಅವರು ನಮ್ಮ ಹಿರಿಯರು ಸಿರಿಧಾನ್ಯಗಳನ್ನು ಆಹಾರದಲ್ಲಿ ಉಪಯೋಗಿಸಿ ಆರೋಗ್ಯವಂತರಾಗಿದ್ದರು. ನಂತರದ ದಿನಗಳಲ್ಲಿ ಅಕ್ಕಿ ಮತ್ತು ಗೋಧಿ ಬಳಸಲು ಪ್ರಾರಂಭಿಸಿದೆವು. ಇಂದು ವೈದ್ಯರುಗಳು ಸಿರಿ ಧಾನ್ಯಗಳನ್ನು ಉಪಯೋಗಿಸುವುದರಿಂದಾಗುವ ಪ್ರಯೋಜನಗಳ ಕುರಿತು ತಿಳಿಸಿ, ಸಿರಿಧಾನ್ಯಗಳನ್ನು ಉಪಯೋಗಿಸುವಂತೆ ಸಲಹೆ ನೀಡುತ್ತಿದ್ದಾರೆ. ಸಿರಿಧಾನ್ಯಗಳನ್ನು ಉಪಯೋಗಿಸುವುದರಿಂದ ಆರೋಗ್ಯ ಚೆನ್ನಾಗಿರುತ್ತದೆ. ರೈತರು ಬೆಳೆದ ಸಿರಿಧಾನ್ಯಗಳನ್ನು ಹೊರ ದೇಶಗಳಿಗೆ ರಫ್ತು ಮಾಡುವ ಸದವಕಾಶ ನಮ್ಮ ದೇಶಕ್ಕೆ ಸಿಕ್ಕಿರುವುದು ತುಂಬಾ ಸಂತೋಷದ ಸಂಗತಿ ಎಂದರು.
ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಮಾತನಾಡಿ ಭಾರತದಲ್ಲಿ ಮನುಕುಲ ಪ್ರಾರಂಭವಾದ ದಿನದಿಂದಲೂ ಯೋಗದ ಕುರಿತು ಪುರಾವೆಗಳಿವೆ, ಪುರಾಣದಲ್ಲಿ ಆದಿ ಯೋಗ ಶಿವ ಸಪ್ತ ಋಷಿಗಳಿಗೆ ಯೋಗ ಮಂತ್ರ ಹೇಳಿಕೊಟ್ಟರು. ಸಪ್ತ ಋಷಿಗಳು ಪ್ರಪಂಚದ ನಾನಾ ಭಾಗಗಳಿಗೆ ಸಂಚರಿಸಿ ಯೋಗದ ಮಹತ್ವವನ್ನು ಪರಿಚಯಿಸಿದರು. ಇಡೀ ವಿಶ್ವಕ್ಕೆ ಭಾರತ ಯೋಗ ಗುರುವಾಗಿ ಹೊರಹೊಮ್ಮಿದೆ, ಸಾವಿರಾರು ವರ್ಷಗಳಿಂದ ನಮ್ಮ ದೇಶದಲ್ಲಿ ಯೋಗ, ಆರೋಗ್ಯ ಪದ್ದತಿ ಇದ್ದರೂ ಕೂಡ, ನಮ್ಮ ದೇಶಕ್ಕೆ ಸೀಮಿತ ಮಾಡದೆ ಪ್ರಪಂಚದ ಎಲ್ಲಾ ದೇಶಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಭಾರತ ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದೆ. ೨೦೧೪ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಯಿತು. ೧೭೫ ದೇಶಗಳು ಅನುಮೋದನೆ ನೀಡಿದವು. ಅಂದಿನಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ಪ್ರಪಂಚದಾದ್ಯಂತ ಇಂದು ೨೫ ಕೋಟಿಗೂ ಹೆಚ್ಚು ಜನರು ಈ ಯೋಗ ಆಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಉಪವಿಭಾಗಾಧಿಕಾರಿ ರಾಜೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಗೀತಾ ಮುಂತಾದವರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!