ಧಾರಾಕಾರ ಮಳೆಗೆ ಕುಸಿದು ಬಿದ್ದ ತಡೆಗೋಡೆ
1 min read
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮಳೆಯಿಂದಾಗಿ ಮನೆಯ ಮುಂದೆ ನಿರ್ಮಿಸಿದ್ದ ಬೃಹತ್ ತಡೆಗೋಡೆ ಏಕಾಏಕಿ ಕುಸಿದು ಬಿದ್ದಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಓಣಿಗಂಡಿ ಗ್ರಾಮದಲ್ಲಿ ನಡೆದಿದೆ. ತಡೆಗೋಡೆ ಕುಸಿತದಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಕಳೆದ ವರ್ಷ ಮನೆಯ ಅಡಿಪಾಯಕ್ಕೆ ಅಡ್ಡಲಾಗಿ ನಿರ್ಮಿಸಿದ್ದ ತಡೆಗೋಡೆ ಇದೀಗ ಮಳೆ ಹೆಚ್ಚಾದ ಪರಿಣಾಮ ಕುಸಿಯಲು ಆರಂಭಿಸಿದೆ. ಗ್ರಾಮದ ಭಾಸ್ಕರ್ ಡೋಂಗ್ರೆ ಎಂಬುವರಿಗೆ ಸೇರಿದ ಮನೆಗೆ ಹಾನಿಯಾಗಿದ್ದು, ಕ್ಷಣ ಕ್ಷಣಕ್ಕೂ ಕುಸಿವ ಭೀತಿ ಎದುರಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು ಕ್ರಮಕ್ಕೆ ಮುಂದಾಗಿದ್ದಾರೆ. ಇನ್ನು ಸೂಕ್ತ ಪರಿಹಾರ ನೀಡುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g