ಕಾಡಾನೆ ದಾಳಿಗೆ ಲಕ್ಷಾಂತರ ಮೌಲ್ಯದ ಬೆಳೆ ನಾಶ
1 min readಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಚಿಕ್ಕಮಗಳೂರು ತಾಲೂಕಿನ ಅಲ್ದೂರು ಅರಣ್ಯ ವಲಯ ವ್ಯಾಪ್ತಿಯಲ್ಲಿರುವ ಕಣತಿ ಗ್ರಾಮದ ಬಳಿ ಕಾಡಾನೆಗಳ ಹಿಂಡು ಕಂಡುಬಂದಿದ್ದು, ಸ್ಥಳೀಯರು, ವಾಹನ ಸವಾರರು ಆತಂಕಗೊಂಡಿದ್ದಾರೆ. ಅದರಲ್ಲಿಯೂ ಚಿಕ್ಕಮಗಳೂರುನಿಂದ ಶೃಂಗೇರಿ ತೆರಳುವ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.
ಚಿಕ್ಕಮಗಳೂರು ತಾಲೂಕಿನ ಕಣತಿ ಗ್ರಾಮದ ಸುತ್ತಮುತ್ತ ಕಳೆದೊಂದು ತಿಂಗಳಿನಿಂದ 7 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ನಿರಂತರವಾಗಿ ಕಾಫಿತೋಟ, ಭತ್ತದ ಗದ್ದೆ ಗಳ ಮೇಲೆ ದಾಂಧಲೆ ಮಾಡುತ್ತಿವೆ. ಲಕ್ಷಾಂತರ ಮೌಲ್ಯದ ಬೆಳೆ ನಾಶ ಮಾಡಿದ್ದು, ಕಾಡಾನೆಗಳ ಸಂಚಾರದಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಅರೇನೂರು, ಕಣತಿ, ಬೆಟ್ಟದಮರಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಕಾಟ ಹೆಚ್ಚಾಗಿದ್ದು, ಕಾಡಾನೆಗಳ ಹಿಂಡನ್ನ ಕಾಡಿಗೆ ಓಡಿಸುವಂತೆ ಗ್ರಾಮಸ್ಥರು ಅರಣ್ಯಇಲಾಖೆಗೆ ಪಟ್ಟು ಹಿಡಿದಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g