ಬರಪೀಡಿತ ಪಟ್ಟಿಗೆ ಚಿಕ್ಕಮಗಳೂರು ಸೇರಿಸಲು ಸಿಎಂಗೆ ಮನವಿ ಸಲ್ಲಿಸಲು ನಿಯೋಗ: ಭರತೇಶ್
1 min readಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕನ್ನು ಬರಪೀಡಿತ ಘೋಷಣೆ ಮಾಡುವಂತೆ ಮನವಿ ಮಾಡಲು ಶೀಘ್ರದಲ್ಲೇ ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳುತ್ತೇವೆ ಎಂದು ಕಾಂಗ್ರೆಸ್ ಕಿಸಾನ್ ಸೆಲ್ ನ ನೂತನ ಜಿಲ್ಲಾಧ್ಯಕ್ಷ ಭರತೇಶ್ ತಿಳಿಸಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಕೆಲ ಹೋಬಳಿಗಳು ಬರಗಾಲ ಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದು ಕ್ಷೇತ್ರದ ಶಾಸಕ ಎಚ್.ಡಿ ತಮ್ಮಯ್ಯ ವಿಧಾನಸಭೆಯಲ್ಲಿ ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ, ಇದಕ್ಕೆ ಪೂರಕವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರನ್ನು ಭೇಟಿ ಮಾಡಿ ಚಿಕ್ಕಮಗಳೂರು ತಾಲೂಕನ್ನು ಬರಗಾಲ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸುವಂತೆ ಮನವಿ ಮಾಡಲು ನಿಯೋಗ ತೆರಳುತ್ತೇವೆ ಎಂದು ಕಾಂಗ್ರೆಸ್ ನ ಕಿಸಾನ್ ಸೆಲ್ ನೂತನ ಅಧ್ಯಕ್ಷ ಭರತೇಶ್ ಹೇಳಿದರು. ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದ್ದು ಜನರಿಗೆ ಅದನ್ನು ತಲುಪಿಸುವ ಕೆಲಸ ಕಿಸಾನ್ ಸೆಲ್ ಮಾಡಲಿದೆ. ಅಲ್ಲದೇ ಸಹಕಾರಿ ಬ್ಯಾಂಕುಗಳಲ್ಲಿ ರೈತರ ಬಡ್ಡಿ ಮನ್ನಾ ಘೋಷಣೆ ಮಾಡಿರುವ ಸಿದ್ದರಾಮಯ್ಯ ಅವರನ್ನು ಇದೇ ವೇಳೆ ಭರತೇಶ್ ಅಭಿನಂದಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g