November 1, 2024

MALNAD TV

HEART OF COFFEE CITY

ಆಯುಷ್ಮಾನ್ ಅನುಷ್ಠಾನದಲ್ಲಿ ಜಿಲ್ಲೆ ರಾಜ್ಯಕ್ಕೆ ಮಾದರಿ;ಜಿಲ್ಲಾಧಿಕಾರಿ ಕೆ.ಎನ್.ರಮೇಶ್

1 min read

 

ಚಿಕ್ಕಮಗಳೂರು: ಆರೋಗ್ಯ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಆಯುಷ್ಮಾನ ಯೋಜನೆ ಅನುಷ್ಠಾನದಲ್ಲಿ ಚಿಕ್ಕಮಗಳೂರು ಜಿಲ್ಲೆ ದೇಶ ಮತ್ತು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.  ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 4.4ಲಕ್ಷ ಆಯುಷ್ಮಾನ್ ಕಾರ್ಡ್ ವಿತರಣೆ ಮಾಡಿದ್ದು, ಅಂದಾಜು 7ಕೋಟಿ ರೂ. ಪರಿಹಾರವನ್ನು ಫಲಾನುಭವಿಗಳು ಪಡೆದುಕೊಂಡಿದ್ದಾರೆಂದು ಹೇಳಿದರು.

ಜಿಲ್ಲೆಯಲ್ಲಿ 171 ಮಕ್ಕಳ ಅಪೌಷ್ಠಿಕತೆಯಿಂದ ಬಳಲುತ್ತಿದ್ದ ಅಪೌಷ್ಠಿಕತೆ ನಿವಾರಣೆಗೆ ಮೂ ಲಭೂತ ಸೌಲಭ್ಯಗಳನ್ನು ನೀಡಲಾಗಿದೆ. 1,825 ಅಂಗನವಾಡಿಗಳ ಪೈಕಿ 1,584 ಅಂಗನ ವಾಡಿಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡಲಾಗಿದೆ. ಶೂನ್ಯದಾಖಲಾತಿ ಯಾಗಿರುವ ಶಾಲೆಗಳನ್ನು ಗುರುತಿಸಿ ಅವುಗಳನ್ನು ಅಂಗನವಾಡಿಗಳಾಗಿ ಪರಿವರ್ತನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕ ಳನ್ನು ಗ್ರಾಮ ಪಂಚಾಯತ್ ದತ್ತುಪಡೆದುಕೊಂಡಿವೆ ಎಂದು ತಿಳಿಸಿದರು.

2021ರಲ್ಲಿ ಜಿಲೆಯಲ್ಲಿ 15 ಬಾಲ್ಯವಿವಾಹ ಪ್ರಕರಣ ನಡೆದಿದ್ದು, 63 ಪ್ರಕರಣಗಳನ್ನು ತಡೆ ಹಿಡಿಯಲಾಗಿದೆ. ಕೋವಿಡ್ ಸಂದರ್ಭದಲ್ಲಿ ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಲು ಅನೇಕ ಕಾರ್ಯಕ್ರಮಗ ಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಸಂಬಾರು ಪದಾರ್ಥವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಅಂದಾಜು 50ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 10ಸಾವಿರ ಮೆಟ್ರಿಕ್ ಟನ್ ಸಂಬಾರು ಪ ದಾರ್ಥವನ್ನು ಬೆಳೆಯಲಾಗುತ್ತಿದ್ದು, ಸಂಬಾರು ಪದಾರ್ಥ ಮಾರುಕಟ್ಟೆ, ಸಂಸ್ಕರಣೆಗೆ ಅನುಕೂಲವಾಗುವಂತೆ ಸ್ಪೈಸ್ ಪಾರ್ಕ್( ಸಂಬಾರು ಉತ್ಪನ್ನಗಳ ಪಾರ್ಕ್) ನಿರ್ಮಾಣಕ್ಕೆ ಅಂಬಳೆ ಗ್ರಾಮದಲ್ಲಿ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಲಾಗಿದ್ದು, ಶೀಘ್ರದಲ್ಲೇ ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!