ಸೂಪರ್-30 ಕಾಲೇಜ್ನಲ್ಲಿ ಎ.ಐ.ಟಿ ಆಯ್ಕೆ
1 min readಚಿಕ್ಕಮಗಳೂರು : ಕರ್ನಾಟಕ ರಾಜ್ಯ ಸರ್ಕಾರವು ಹಲವು ಮಾನದಂಡಗಳ ಆಧಾರದ ಮೇಲೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದೊಡಗೂಡಿ ಆಯ್ಕೆ ಮಾಡಿರುವ ಸೂಪರ್ 30 ಕಾಲೇಜಿನಲ್ಲಿ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯ ಆಯ್ಕೆಯಾಗಿರುವುದಕ್ಕೆ ಸಂತೋಷವಿದೆ ಎಂದು ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಟಿ. ಜಯದೇವ್ ಹೇಳಿದರು.
ಈ ಬಗ್ಗೆ ಮಲ್ನಾಡ್ ಟಿವಿಯೊಂದಿಗೆ ಮಾತನಾಡಿದ ಅವರು ಕರ್ನಾಟಕ ಸರ್ಕಾರ ಅಂತರಾಷ್ಟ್ರೀಯ ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡಬೇಕೆನ್ನುವ ಗುರಿ ಹಿನ್ನೆಲೆಯಲ್ಲಿ, ಪ್ರತಿ ಜಿಲ್ಲೆಯಲ್ಲಿ ಒಂದು ಗುಣಮಟ್ಟದ ಕಾಲೇಜನ್ನು ಆಯ್ಕೆ ಮಾಡಿ ಆ ಮೂಲಕ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉತ್ತಮ ಉದ್ಯೋಗ ಸೃಷ್ಠಿ ಮಾಡಲು ಹಲವು ಮಾನದಂಡಗಳ ಆಧಾರದಲ್ಲಿ ಗುಣಮಟ್ಟದ ಸರ್ಕಾರಿ ಹಾಗೂ ಖಾಸಗಿ ಕಾಲೇಜ್ಗಳನ್ನು ಆಯ್ಕೆ ಮಾಡಿದೆ. ಅವುಗಳಲ್ಲಿ ಚಿಕ್ಕಮಗಳೂರಿನ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯವು ಒಂದಾಗಿದೆ ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g