April 29, 2024

MALNAD TV

HEART OF COFFEE CITY

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ 27 ವರ್ಷದ ಯುವಕ ಸಾವು

1 min read

 

ಚಿಕ್ಕಮಗಳೂರು.ನ.26: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಮೃತ ಅಭಿಷೇಕ್ ಮೂರು ಎಕರೆ ಅಡಿಕೆ ತೋಟವಿತ್ತು. ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು. ಭಾನುವಾರ ಸಂಜೆ ತೋಟದಲ್ಲಿ ತೆಂಗಿನಕಾಯಿ ಕೀಳಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ತೋಟದಲ್ಲಿ ಒಂದು ಮರದಿಂದ ಮತ್ತೊಂದು ತೆಂಗಿನ ಮರದ ಬಳಿ ಹೋಗುವಾಗ ಅಲ್ಯುಮಿನಿಯಂ ಏಣಿಯನ್ನ ಎತ್ತಿಕೊಂಡು ಹೋಗುವಾಗ ಪ್ರೈಮರಿ ಲೈನ್ (11 ಸಾವಿರ ಕಿಲೋ ವ್ಯಾಟ್) ವಿದ್ಯುತ್ ತಂತಿಗೆ ಏಣಿ ತಗುಲಿ ಸಾವನ್ನಪ್ಪಿದ್ದಾನೆ. ವಿದ್ಯುತ್ ಶಾಕ್ ನಿಂದ ತೋಟದಲ್ಲೇ ಬಿದ್ದಿದ್ದ ಅಭಿಷೇಕ್ ನನ್ನು ಕೂಡಲೇ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರು ಕೂಡ ತೀವ್ರವಾದಂತ ವಿದ್ಯುತ್ ಶಾಕ್ ನಿಂದ ಅಭಿಷೇಕ್ ಅಸುನೀಗಿದ್ದಾನೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!