May 3, 2024

MALNAD TV

HEART OF COFFEE CITY

200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

1 min read

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಮಾರುತಿ 800 ಕಾರು 200 ಅಡಿ ಆಳದ ಪ್ರಪಾತಕ್ಕೆ ಬಿದ್ದು, ಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕು ಜನ್ನಾಪುರದ ಬಳಿ ನಡೆದಿದೆ. ರಂಜನ್ (38) ಮೃತ ಚಾಲಕ. 800 ಕಾರು ಸಂಪೂರ್ಣ ನಜ್ಜುಗೊಜ್ಜಗಿದ್ದು, ತಡೆಗೋಡೆ ಇಲ್ಲದೆ ಏಕಾಏಕಿ ಕಾರು ಪ್ರಪಾತಕ್ಕೆ ಉರುಳಿ ಬಿದಿದ್ದರಿಂದ ಚಾಲಕ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ಈ ಅವಘಡ ಸಂಭವಿಸಿದೆ.

ಈ ತಿರುವಿನಲ್ಲಿ ತಡೆಗೋಡೆ ನಿರ್ಮಿಸಲು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರು ತಡೆಗೋಡೆ ನಿರ್ಮಿಸಿಲ್ಲ ಆದ್ದರಿಂದ ಈ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದು ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!