April 27, 2024

MALNAD TV

HEART OF COFFEE CITY

ಭೀಕರ ಅಪಘಾತ ಸ್ಕೂಟಿಯಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

1 min read

ಸ್ಕೂಟಿ-ಬೊಲೆರೋ ಮಧ್ಯೆ ಭೀಕರ ಅಪಘಾತ ಸಂಭವಿಸಿ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ಘಟನೆ ಆಕ್ಸಿಡೆಂಟ್ ನಲ್ಲಿ
ಅರ್ಜುನ್ ಹಾಗೂ ಶ್ವೇತ ದಂತಪತಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ ದಂಪತಿಗಳು ಅಜ್ಜಂಪುರ ತಾಲೂಕಿನ ಸಿದ್ಧಾಪುರ ಗ್ರಾಮದವರು ಎಂದು ತಿಳಿದು ಬಂದಿದೆ. ಊರಿನಿಂದ ಅಜ್ಜಂಪುರಕ್ಕೆ ಸಂಬಂಧಿಕರ ಮನೆಗೆ ದಂಪತಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಬೊಲೆರೋ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಸ್ಕೂಟಿ ಸವಾರಿ ಮಾಡುತ್ತಿದ್ದ ಅರ್ಜುನ್ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅಜ್ಜಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರು ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಬಲೆನೋ ಚಾಲಕ ದಾವಣಗೆರೆ ಮೂಲದವನು ಎನ್ನಲಾಗುತ್ತಿದ್ದು, ಅವನನ್ನು ಬಂಧಿಸಿರುವ ಅಜ್ಜಂಪುರ ಪೊಲೀಸ್ ರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ದಂಪತಿಗಳು ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದ್ದು, ಆಸ್ಪತ್ರೆ ಬಳಿ ಜನರು ಜಮಾಯಿಸಿದ್ದಾರೆ. ಮುಖ್ಯ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಾರ್ವಜನಿಕರು ಬಲೆರೊ ಚಾಲಕನಿಗೆ ಹಿಡಿಶಾಪ ಹಾಕುತ್ತಿದ್ದುದು ಸ್ಥಳದಲ್ಲಿ ಕಂಡು ಬಂತು. ಸದ್ಯ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!