May 5, 2024

MALNAD TV

HEART OF COFFEE CITY

ಸಿಲಿಂಡರ್ ಸ್ಪೋಟ, ಮನೆ ಸಂಪೂರ್ಣ ಜಖಂ, ಮನೆಯಲ್ಲಿ ಯಾರೂ ಇಲ್ಲದ್ದರಿಂದ ತಪ್ಪಿದ ಅನಾಹುತ

1 min read

 

ಚಿಕ್ಕಮಗಳೂರು. ಸಿಲಿಂಡರ್ ಸ್ಫೋಟಗೊಂಡು ಮನೆ ಸಂಪೂರ್ಣ ಜಖಂಗೊಂಡಿರೋ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖದ ವಿನೋಭನಗರದಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟಗೊಂಡಾಗ ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಗುರವಾರ ಸಂಜೆ ಐದು ಗಂಟೆ ವೇಳೆಯಲ್ಲಿ ಈ ದುರ್ಘಟನೆ ನಡೆದಿದ್ದು ಆಗ ಮನೆಯಲ್ಲಿ ಯಾರೂ ಇರಲಿಲ್ಲ. ಹಾಗಾಗಿ, ಸಾವು-ನೋವು ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದರೆ, ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಮನೆ ಸಂಪೂರ್ಣ ಜಖಂಗೊಂಡಿದೆ. ಮನೆಯಲ್ಲಿ ಲಕ್ಷ್ಮಮ್ಮ ಎಂಬ ಮಹಿಳೆ ವಾಸವಿದ್ದರು.

ಆದರೆ, ಈ ವೇಳೆ ಆ ಮಹಿಳೆ ಸೀಬೆಹಣ್ಣನ್ನ ಮಾರಾಟ ಮಾಡಲು ಹೊರಗಡೆ ಹೋಗಿದ್ದರಿಂದ ಹಾಗಾಗಿ ಅವರು ಮನೆಯಲ್ಲಿ ಇರಲಿಲ್ಲ. ಒಂದು ವೇಳೆ ಅವರು ಮನೆಯಲ್ಲಿ ಇದ್ದಿದ್ದರೆ ದೊಡ್ಡ ಅನಾಹುತವೇ ಸಂಭವಿಸುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ಲಕ್ಷ್ಮಮ್ಮ ಮನೆಯಲ್ಲಿ ಇಲ್ಲದ ಕಾರಣ ಅಪಾಯದಿಂದ ಪಾರಾಗಿದ್ದಾರೆ. ಕುದುರೆಮುಖ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!