May 14, 2024

MALNAD TV

HEART OF COFFEE CITY

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

1 min read

ಚಿಕ್ಕಮಗಳೂರು : ಜಿಲ್ಲೆಯ ಕಾಡೂರು ತಾಲೂಕಿನ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಮಂಜುನಾಥ( 38) ಮೃತ ದುದೈವಿ.

ಮಂಜುನಾಥ ತನ್ನ ತಂದೆಗೆ ಸೇರಿದ 2 ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ, ಇತ್ತೀಚೆಗೆ ಸೂರ್ಯಕಾಂತಿ, ನೆಲಗಡಲೆ, ಈರುಳ್ಳಿ ಬೆಳೆಯಲು ವಿವಿಧ ಬ್ಯಾಂಕ್ ಹಾಗೂ ಫೈನಾನ್ಸ್ ಮತ್ತಿತರ ಕಡೆಗಳಲ್ಲಿ ಸುಮಾರು 5 ಲಕ್ಷ ರೂ ಸಾಲ ಮಾಡಿಕೊಂಡಿದ್ದ. ಬೆಳೆ ಸರಿಯಾಗಿ ಬರದ ಕಾರಣ ಮನನೊಂದು ಅವರ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಪತ್ನಿ ರೇಣುಕಮ್ಮ ನೀಡಿದ ದೂರಿನ ಆಧಾರದಲ್ಲಿ ಯಗಟಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೀರೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಶವಪರೀಕ್ಷೆ ನಡೆಸಿ ವರದಿ ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!