ಭಾರೀ ಮಳೆ ಹಿನ್ನೆಲೆ ಉಕ್ಕಿ ಹರಿಯುತ್ತಿದ್ದ ಹೇಮಾವತಿ ಉಪ ನದಿಗೆ ಬಿದ್ದು ರೈತ ಸಾವು
1 min read
ಜಾನುವಾರು ಕಟ್ಟಲು ಹೋದಾಗ ರೈತರೊಬ್ಬರು ಆಕಸ್ಮಿಕವಾಗಿ ಹೊಳೆಗೆ ಜಾರಿ ಬಿದ್ದಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಬೈದುವಳ್ಳಿ ಗ್ರಾಮದಲ್ಲಿ ನಡೆದಿದೆ.
ಬೈದುವಳ್ಳಿ ಗ್ರಾಮದ ಕೃಷಿಕ ಬಿ.ಎಲ್. ಗೋಪಾಲಗೌಡ(63 ವರ್ಷ) ಇಂದು ಸುಮಾರು 9-30 ಬೆಳಿಗ್ಗೆ ಜಾನುವಾರುಗಳನ್ನು ಕಟ್ಟಲು ಹೋದಾಗ ಆಕಸ್ಮಿಕವಾಗಿ ತುಂಬಿ ಹರಿಯುತ್ತಿದ್ದ ಹೇಮಾವತಿ ಉಪನದಿಗೆ ಜಾರಿ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ನೀರು ರಭಸವಾಗಿ ಹರಿಯುತ್ತಿದ್ದರಿಂದ ಗೋಪಾಲ್ ಮೇಲೇಳಲಾಗದೇ ಹೊಳೆಯ ಹರಿವಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅವಿವಾಹಿತರಾಗಿದ್ದ ಗೋಪಾಲ್ ಗೌಡ ಅವರು ಕೃಷಿಕರಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಅವರಿಗಾಗಿ ಶೋಧ ನಡೆಸಿದ್ದು ಪತ್ತೆಯಾಗಿಲ್ಲ. ಸ್ಥಳಕ್ಕೆ ಗೋಣಿಬೀಡು ಪೊಲೀಸರು, ಅಗ್ನಿಶಾಮಕ ದಳ, ಮುಳುಗು ತಜ್ಞರು ಆಗಮಿಸಿ ಶವಕ್ಕಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಗೋಪಾಲ್ ಅವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.
ಸ್ಥಳಕ್ಕೆ ಮೂಡಿಗೆರೆ ತಹಸೀಲ್ದಾರ್ ರಾಜಶೇಖರ್ ಮೂರ್ತಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಗೋಣಿಬೀಡು ಎಸ್ಐ ಹರ್ಷಗೌಡ ಸಿಬ್ಬಂದಿ ಗಳ ಜೊತೆ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಬೈದವಳ್ಳಿ ಸೇತುವೆ ಬಳಿ ನೂರಾರು ಜನರು ಜಮಾವಣೆಯಾಗಿ ಕಾರ್ಯಾಚರಣೆ ವೀಕ್ಷಿಸುತ್ತಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g