April 29, 2024

MALNAD TV

HEART OF COFFEE CITY

ಯುವತಿಗೆ ಡೈರಿಮಿಲ್ಕ್ ಕೊಡಿಸಿದ್ದಕ್ಕೆ ಅನ್ಯಕೋಮಿನ ಯುವಕನ ಮೇಲೆ ತೀವ್ರ ಹಲ್ಲೆ

1 min read

 

ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಪೊಲೀಸ್ ನೈತಿಕ ಗಿರಿ ನಡೆದಿರುವ ಪ್ರಕರಣ ವರದಿಯಾಗಿದೆ.

ಅನ್ಯ ಕೋಮಿನ ಯುವಕನ ಮೇಲೆ ಹತ್ತಾರು ಪುಂಡರ ಗುಂಪು ಹಲ್ಲೆ ಮಾಡಿ ಹಿಗ್ಗಾಮುಗ್ಗ ಥಳಿಸಿ ಪೊಲೀಸ್ ನೈತಿಕಗಿರಿ ಪ್ರದರ್ಶಿಸಿದ್ದಾರೆ.

ಯುವತಿಯೋರ್ವಳಿಗೆ ಡೈರಿ ಮಿಲ್ಕ್ ಕೊಡುತ್ತಿದ್ದ ಎಂಬ ಕಾರಣಕ್ಕೆ ಬಣಕಲ್ ಮೂಲದ ಯುವಕನಿಗೆ
ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಲಾಗಿದೆ. ಮಂಗಳವಾರ ಸಂಜೆ ಸಮಯದಲ್ಲಿ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಅನ್ಯ ಕೋಮಿನ ಯುವಕ ಯುವತಿಯೋರ್ವಳಿಗೆ ಡೈರಿ ಮಿಲ್ಕ್ ಕೊಡುವಾಗ ಕಾರಿನಲ್ಲಿ ಬಂದ ಯುವಕರ ತಂಡದಿಂದ ಯುವಕನ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಬಸ್
ನಿಲ್ದಾಣ ನಿಯಂತ್ರಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಗಮಿಸಿದ ಪಿಎಸೈ ಮತ್ತು ಸಿಬ್ಬಂದಿ
ಮುಂದಾಗುವ ಅನಾಹುತ ತಪ್ಪಿಸಿ ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೇ ಹಲ್ಲೆ ನಡೆಸಿ ತಪ್ಪಿಸಿಕೊಂಡ ಪುಂಡರಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ನಡುವೆ ಮೂಡಿಗೆರೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಪುಂಡ ಯುವಕರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!