May 5, 2024

MALNAD TV

HEART OF COFFEE CITY

50ನೇ ವರ್ಷದ ಅಯ್ಯಪ್ಪ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಅಂಗವಾಗಿ ಅದ್ದೂರಿ ಮೆರವಣಿಗೆ

1 min read

ಚಿಕ್ಕಮಗಳೂರು: 50ನೇ ವರ್ಷದ ಅಯ್ಯಪ್ಪ ಸ್ವಾಮಿಯವರ ವಿಗ್ರಹ ಪ್ರತಿಷ್ಠಾಪನೆ ಅಂಗವಾಗಿ ಸ್ವಾಮಿಯವರ ಅದ್ದೂರಿ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ನಡೆಯಿತು. ಅಯ್ಯಪ್ಪ ಮಾಲೆ ಧರಿಸಿದ್ದ ಮಾಲಾಧಾರಿಗಳು ಮೆರವಣಿಗೆಯಲ್ಲಿ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.

 

ನಗರದ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಅಯ್ಯಪ್ಪ ಸ್ವಾಮಿ ವಿಗ್ರಹದ ಬೃಹತ್ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಅದ್ದೂರಿಯಾಗಿ ಜರುಗಿತು. ವಿಗ್ರಹ ಪ್ರತಿಷ್ಟಾಪನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು. ಭವ್ಯವಾದ ಮೆರವಣಿಗೆಯಲ್ಲಿ ಆಕರ್ಷಕವಾದ ಈಶ್ವರನ, ಕೃಷ್ಣನ ಸುಬ್ರಹ್ಮಣ್ಯ ಸ್ವಾಮಿ, ಟ್ಯಾಬ್ಲೋಗಳು ಗಮನ ಸೆಳೆದರೆ , ಚಂಡೆ ವಾದ್ಯ, ವೀರಗಾಸೆ , ಕೀಲು ಕುದುರೆ, ನಂದಿ ಧ್ವಜ ದೇವರಕುಣಿತ, ಹುಲಿವೇಷ, ಕರಡಿ ಕುಣಿತ , ಕೃಷ್ಣ ವೇಷಧಾರಿಗಳು , ಯಕ್ಷಗಾನ ಕಲಾವಿದರು ಮೆರಗು ನೀಡಿದವು. ಮೆರವಣಿಗೆಯಲ್ಲಿ ನೂರಾರು ಅಯ್ಯಪ್ಪ ಮಾಲಾಧಾರಿಗಳು ಸಹಾ ಪಾಲ್ಗೊಂಡಿದ್ದರು. ಮೆರವಣಿಗೆ ನಂತರ ಬೋಳರಾಮೇಶ್ವರ ದೇವಾಲಯ ಆವರಣದಲ್ಲಿ ಪಟಾಕಿ ಸಿಡಿಮದ್ದು ಪ್ರದರ್ಶನ ನಡೆಯಿತು.

ಶ್ರೀ ಅಯ್ಯಪ್ಪ ಸ್ವಾಮಿ ಪೂಜಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಶೋಕ್ ಸಚ್ಚದೇವ್ ರವರ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿಯ ಮೆರವಣಿಗೆಯನ್ನು ಹಮ್ಮಿಕೊಂಡಿದ್ದು, ಮೆರವಣಿಗೆಯು ಶ್ರೀ ಬೊಳರಾಮೇಶ್ವರ ಸ್ವಾಮಿ ದೇವಸ್ಥಾನದ ಆವರಣದಿಂದ ಪ್ರಾರಂಭವಾಗಿ ಕೆ.ಎಂ.ರಸ್ತೆ,- ಐ.ಜಿ.ರಸ್ತೆ,- ಎನ್.ಎಂ.ಸಿ. ಸರ್ಕಲ್ -ಮಲ್ಲಂದೂರು ರಸ್ತೆ,- ವಿಜಯಪುರ ಆಂಜನೇಯಸ್ವಾಮಿ ದೇವಸ್ಥಾನದ ರಸ್ತೆ ಮೂಲಕ, ಮಾರ್ಕೊ ಮೆಸ್ ಬಳಿ ಬಂದು ವಿಜಯಪುರ ಮುಖ್ಯ ರಸ್ತೆಯಲ್ಲಿ ಸಾಗಿ, ಆಶಿರ್ವಾದ್ ಸರ್ಕಲ್, ಆರ್.ಜಿ.ರಸ್ತೆ, ಟೌನ್ ಕ್ಯಾಂಟಿನ್ ಸರ್ಕಲ್, ಕೆ.ಇ.ಬಿ. ಸರ್ಕಲ್, ಬಸವನಹಳ್ಳಿ ಮುಖ್ಯ ರಸ್ತೆ, ಹನುಮಂತಪ್ಪ ಸರ್ಕಲ್, ಎಂ.ಜಿ.ರಸ್ತೆ, ಆಜಾದ್‌ಪಾರ್ಕ್ ಸರ್ಕಲ್, ಬೇಲೂರ್ ರಸ್ತೆ, ಕೋಟೆ ಸರ್ಕಲ್ ಸುಗ್ಗಿಕಲ್ಸ್ ರಸ್ತೆ, ಹೊಸಮನೆ ಸರ್ಕಲ್ ಮಾರ್ಗವಾಗಿ ಜಿಲ್ಲಾ ಆಟದ ಮೈದಾನದ ರಸ್ತೆ ಮೂಲಕ ವಾಪಸ್ ರಾತ್ರಿ 9-30 ಗಂಟೆಗೆ ಬೋಳರಾಮೇಶ್ವರ ದೇವಸ್ಥಾನದ ಆವರಣಕ್ಕೆ ಬಂದು ಸದರಿ ಮೆರವಣಿಗೆ ಮುಕ್ತಾಯವಾಗಲಿದೆ. ಈ ಕಾರ್ಯಕ್ರಮದಲ್ಲಿ ಮಾಲಾಧಾರಿಗಳು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!