May 19, 2024

MALNAD TV

HEART OF COFFEE CITY

ಆರ್.ದೃವನಾರಾಯಣ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಭೆ

1 min read

 ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರೂ ಸಹ ಭಾಗವಹಿಸಿ ಪಕ್ಷಕ್ಕೆ ಸಂಬ0ಧಿಸಿದ ಸಲಹೆ, ಸೂಚನೆಗಳನ್ನು ನೀಡುವ ಮೂಲಕ ಪಕ್ಷ ಸಂಘಟನೆಯ ಬಗ್ಗೆ ಚಿಂತಿಸುತ್ತಿದ್ದರು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಕೆ.ಪಿ.ಅಂಶುಮತ್ ನೆನಪಿಸಿಕೊಂಡರು.ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಇಂದು ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಆರ್.ದೃವನಾರಾಯಣ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುವ ಸಭೆಯಲ್ಲಿ ಮಾತನಾಡಿದರು.ಆರ್.ದೃವನಾರಾಯಣ್ ಅವರು ಬಹಳ ಸಜ್ಜನ, ಸರಳ, ಧೀಮಂತ ರಾಜಕಾರಣಿಯಾಗಿದ್ದರು. ಸರಳತೆಯಿಂದ ಎಲ್ಲರನ್ನು ವಿಶ್ವಾಸಗಳಿಸಿದ್ದ ಅವರು ಯಾವಾಗಲೂ ಪಕ್ಷ ಸಂಘಟನೆ ಬಗ್ಗೆ ಚಿಂತಿಸುತ್ತಿದ್ದ ಮಹಾನ್ ಚೇತನ. ಧೀಮಂತ ನಾಯಕನನ್ನು ಕಳೆದುಕೊಂಡ ಚಿಕ್ಕಮಗಳೂರು ಜಿಲ್ಲೆ ಬಡವಾಗಿದೆ ಎಂದರು.ಆರ್.ದೃವನಾರಾಯಣ್ ಅವರ ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು. ಅವರು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ಪಕ್ಷವನ್ನು ಸದೃಗೊಳಿಸಲು ಮುಖಂಡರು ಹಾಗೂ ಕಾರ್ಯಕರ್ತರು ಮುಂದಾಗಬೇಕು ಎಂದು ಹೇಳಿದರು.ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸ0ದೀಪ್ ಮಾತನಾಡಿ, ಆರ್.ದೃವನಾರಾಯಣ್ ಅವರು ಪಕ್ಷದ ಯಾವುದೇ ಕೆಲಸವಿರಲಿ ಬಹಳ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಂಘಟನಾ ಚತುರರಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುತ್ತಿದ್ದರು. ಅವರ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನ0ದಸ್ವಾಮಿ ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ರೇಖಾಹುಲಿಯಪ್ಪ ಗೌಡ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಕೆಪಿಸಿಸಿ ಸದಸ್ಯ ಎ.ಎನ್.ಮಹೇಶ್ ಕೆಪಿಸಿಸಿ ವಕ್ತಾರ ಹೆಚ್.ಹೆಚ್.ದೇವರಾಜ್ ಕಾಂಗ್ರೆಸ್ ಮುಖಂಡ ಹೆಚ್.ಡಿ.ತಮ್ಮಯ್ಯಕಾಂಗ್ರೆಸ್ ಮುಖಂಡ ಬಿ.ಹೆಚ್.ಹರೀಶ್ ಪ್ರಚಾರ ಸಮಿತಿ ಅಧ್ಯಕ್ಷ ಸೈಯದ್ ಹನೀಪ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಮಹಮದ್ ನಯಾಜ್, ಜಿಲ್ಲಾ ವಕ್ತಾರ ರೂಬಿನ್ ಮೊಸಸ್, ಎಸ್.ಸಿ ಘಟಕದ ಪ್ರಧಾನ ಕಾರ್ಯದರ್ಶಿ ಹೆಚ್.ಎನ್.ಸುರೇಶ್ ಆರ್.ದೃವನಾರಾಯಣ್ ಅವರ ಬಗ್ಗೆ ಮಾತನಾಡಿದರು.
ಶ್ರದ್ಧಾಂಜಲಿ ಸಭೆಯಲ್ಲಿ ನಗರಾಧ್ಯಕ್ಷ ತನೋಜ್ ಕುಮಾರ್ ನಾಯ್ಡು, ಎಸ್.ಸಿ.ಘಟಕದ ಜಿಲ್ಲಾಧ್ಯಕ್ಷ ಮಲ್ಲೇಶಸ್ವಾಮಿ, ನಗರಸಭೆ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳು, ಪಕ್ಷದ ಮುಖಂಡರುಗಳು, ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!