May 7, 2024

MALNAD TV

HEART OF COFFEE CITY

ಧಾರಾಕಾರ ಮಳೆಯಿಂದ ಕುಸಿದ ಬಿದ್ದ ಮನೆ

1 min read

 

ಚಿಕ್ಕಮಗಳೂರು : ಕಳೆದ ಎರಡು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ನಿರಂತರ ಮಳೆಯಿಂದಾಗಿ ತೀವ್ರ ಶೀತ ಗೊಂಡಿದ್ದ ಮನೆಯ ಗೋಡೆ ಕುಸಿದು ಮನೆಯಲ್ಲಿದ್ದವರು ಅದೃಷ್ಟವಶಾತ್ ಪಾರಾದ ಘಟನೆ ಚಿಕ್ಕಮಗಳೂರು ಜಿಲ್ಲೆ, ತರೀಕೆರೆ ತಾಲೂಕಿನ ಸೀತಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಟೇಶ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮಧ್ಯಾಹ್ನದ ವೇಳೆ ಅಡುಗೆ ಮಾಡುತ್ತಿದ್ದಾಗಲೇ ಏಕಾಏಕಿ ಮನೆಯ ಗೋಡೆಗಳು ಕುಸಿದು ಬಿದ್ದಿವೆ. ಅದೃಷ್ಟವಶಾತ್ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದು, ಮನೆ ಭಾಗಶಃ ಸಂಪೂರ್ಣ ನಾಶವಾಗಿದೆ. ಮನೆಯಲ್ಲಿ ಇಟ್ಟಿದ್ದ ಪಾತ್ರೆ ದವಸ ಧಾನ್ಯಗಳು ನಾಶವಾಗಿವೆ. ಕಳೆದ ಎರಡು ದಿನಗಳಿಂದ ತರೀಕೆರೆ ಸೇರಿದಂತೆ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು ಮಳೆ ಪರಿಣಾಮ ಮನೆಯ ಅಡಿಪಾಯ ಸಂಪೂರ್ಣ ಶೀತವಾದ ಪರಿಣಾಮ ಗೋಡೆ ಕುಸಿತಕ್ಕೆ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!