ಚಲಿಸುತ್ತಿದ್ದ ಆಟೋ ಕಾರುಗಳ ಮೇಲೆ ಬಿದ್ದ ಬೃಹತ್ ಮರ
1 min read
ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಹೆಚ್ಚುತ್ತಲೇ ಇದೆ. ಚಿಕ್ಕಮಗಳೂರು ತಾಲೂಕಿನಲ್ಲೂ ಕೂಡಾ ಭಾರಿ ಗಾಳಿ ಮಳೆ ಆರ್ಭಟಿಸುತ್ತಿದೆ. ಭಾರಿ ಗಾಳಿಗೆ ರಾಷ್ಟ್ರೀಯ ಹೆದ್ದಾರಿಗೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ. ಈ ವೇಳೆ ಚಲಿಸುತ್ತಿದ್ದ ಎರಡು ಕಾರಿನ ಒಳಗಿದ್ದ ಪ್ರಯಾಣಿಕರು ಜಸ್ಟ್ ಮಿಸ್ ಆಗಿದ್ದಾರೆ. ಮರ ಬಿದ್ದ ರಭಸಕ್ಕೆ ಅಲ್ಲೇ ನಿಲ್ಲಿಸಿದ್ದ ಆಟೋ ಸಂಪೂರ್ಣ ಜಖಂ ಆಗಿದೆ. ಚಿಕ್ಕಮಗಳೂರು ನಗರದ ಹೊರವಲಯದ ಗವನಹಳ್ಳಿ ಬಳಿ ಘಟನೆ ನಡೆದಿದ್ದು, ಕಡೂರು ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಈ ಅವಘಡ ಸಂಭವಿಸಿದೆ
ಮರ ಬೀಳುತ್ತಿದ್ದಂತೆ ಸ್ಥಳಕ್ಕೆ ಓಡೋಡಿ ಬಂದ ಸಾರ್ವಜನಿಕರು ರಕ್ಷಣಾ ಕಾರ್ಯದಲ್ಲಿ ತೊಡಗುತ್ತಾರೆ.
ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ ಎರಡು ಕಾರುಗಳು ಪಾರಾಗುತ್ತವೆ. ಆದರೆ ಎರಡು ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಪ್ರಾಣಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ
ಮರ ಬಿದ್ದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿತ್ತು.
ಚಿಕ್ಕಮಗಳೂರು ತಾಲೂಕಿನಾದ್ಯಂತ ಮಳೆ ಬಿರುಗಾಳಿಗೆ ಮರಗಳು ಬೀಳುವ ಘಟನೆ ದಿನೇ ದಿನೇ ಹೆಚ್ಚುತ್ತಿವೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g