May 14, 2024

MALNAD TV

HEART OF COFFEE CITY

ಪೇಂಟಿಂಗ್ ಮಾಡುವ ವೇಳೆ ಮೂರನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

1 min read

ಚಿಕ್ಕಮಗಳೂರು: ಪೇಂಟಿಂಗ್ ಮಾಡುವ ವೇಳೆ ಮೂರನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ. ರಘು ಸ್ಟಿಕರ್ಸ್ ನೂತನ ಕಟ್ಟಡ ಪೇಂಟಿಂಗ್ ವೇಳೆ ಈ ದುರ್ಘಟನೆ ಸಂಭವಿಸಿದೆ.

ನಗರದ ಮಾರ್ಕೆಟ್ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ರಘು ಸ್ಟಿಕರ್ಸ್ ಕಟ್ಟಡಕ್ಕೆ ಪೇಂಟಿಂಗ್ ಮಾಡುತ್ತಿದ್ದ ವೇಳೆ ಹಗ್ಗ ತುಂಡಾಗಿ ಪೈಂಟರ್ ಒಬ್ಬ ಮೂರನೇ ಮಹಡಿಯಿಂದ ಬಿದ್ದು ತೀವ್ರ ರಕ್ತಸ್ರಾವವಾಗಿ ಹಾಸನದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ತಲೆಗೆ ತೀವ್ರ ಪೆಟ್ಟಾದ ಜಗದೀಶ್ ಎಂಬ ಪೈಂಟರ್ ಅಸುನೀಗಿದ್ದಾನೆ. ಯಾವುದೇ ಸೇಫ್ಟಿ ಇಲ್ಲದೆ ಕಟ್ಟಡ ಏರಿ ಕೆಲಸ ಮಾಡುವ ವೇಳೆ ಏಕಾಏಕಿ ಹಗ್ಗ ತುಂಡಾಗಿ ಅವಘಡ ಸಂಭವಿಸಿದೆ. ಚಿಕ್ಕಮಗಳೂರು ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಜಗದೀಶ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಲಾಗಿದೆ ಜೊತೆಗೆ ಕಾರ್ಮಿಕರಿಗೆ ಭದ್ರತೆ ಪರಿಕರಗಳನ್ನು ಒದಗಿಸುವಂತೆ ಒತ್ತಾಯಿಸಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!