May 4, 2024

MALNAD TV

HEART OF COFFEE CITY

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬೇಕಿದೆ ಅರೋಗ್ಯ..!

1 min read

ಚಿಕ್ಕಮಗಳೂರು: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂಬ ಉದ್ದೇಶದಿಂದ ಆರೋಗ್ಯ ಇಲಾಖೆಯಲ್ಲಿರುವ ಸೇವೆ ಮತ್ತು ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಗಾರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ವತಿಯಿಂದ ಪ್ರೆಸ್ ಕ್ಲಬ್ ನಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಅಶ್ವಥ್ ಬಾಬು ತಾಯಿಯ ಆರೋಗ್ಯ ಕಾರ್ಯಕ್ರಮಗಳು, ಮಕ್ಕಳ ಆರೋಗ್ಯ ಕಾರ್ಯಕ್ರಮ ಹಾಗೂ ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಇದೇ ವೇಳೆ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮತ್ತು ಸಾರ್ವಜನಿಕ ವಲಯಗಳಲ್ಲಿ ಇಲಾಖೆ ಸೇವೆಗಳ ಬಗ್ಗೆ ಕೇಳಿಬರುವ ಕುಂದು-ಕೊರತೆಗಳ ಬಗ್ಗೆ ಕೂಡ ಚರ್ಚೆ ಮಾಡಲಾಯಿತು. ಅಲ್ಲದೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಎಂಬ ಯೋಜನೆಯ ಉದ್ದೇಶ ವ್ಯಾಪ್ತಿಗಳನ್ನು ಸಾರ್ವಜನಿಕರಿಗೆ ತಿಳಿಸಲಾಯಿತು.

ಅರ್ಹತೆ ಹಾಗೂ ಚಿಕಿತ್ಸಾ ಮೊತ್ತ ಎಷ್ಟು?

  •  ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.5.00 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯ.
  •  ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡ್ ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ 30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ.
  •   ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು.

ಯಾವ ಚಿಕಿತ್ಸೆಗಳು ಲಭ್ಯ?

  • ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು, ಮಾರಣಾಂತಿಕ ಕಾಯಿಲೆಗಳಾದ ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮುಂತಾದ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳು ಮತ್ತು 36 ಉಪಚಿಕಿತ್ಸಾ ವಿಧಾನಗಳು ಸೇರಿ ಒಟ್ಟು 1650 ಚಿಕಿತ್ಸೆಗಳು ಲಭ್ಯ
  •  169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.
  • ವಿವರಗಳಿಗೆ ವೆಬ್ ಸೈಟ್: www.sast.gov.in/home ನೋಡಬಹುದು.

ನೋಂದಾಯಿತ ಆಸ್ಪತ್ರೆಗಳ ಮಾಹಿತಿ ಪಡೆಯುವುದು ಹೇಗೆ?

  • ಟೋಲ್ ಫ್ರೀ ಸಂಖ್ಯೆ: 1800 425 8330 ಗೆ ಕರೆ ಮಾಡಿ ತಿಳಿದುಕೊಳ್ಳಬಹುದು ಹಾಗೂ ಸಂಬಂಧಿಸಿದ ಆಸ್ಪತ್ರೆಯ ಆರೋಗ್ಯ ಮಿತ್ರರ ಮೊಬೈಲ್‌ ಸಂಖ್ಯೆ ಪಡೆದುಕೊಂಡು ಅವರನ್ನು ಸಂಪರ್ಕಿಸಬಹುದು.
  • ವೆಬ್ ಸೈಟ್ : www.sast.gov.in/home, www.arogya.karnataka.gov.in ನಲ್ಲಿ ನೋಡಬಹುದು.
  • ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಕಟಿಸಿರುವ ಸಮೀಪದ ನೊಂದಾಯಿತ ಆಸ್ಪತ್ರೆಗಳ ಪಟ್ಟಿಯನ್ನು ನೋಡಬಹುದು.
  • ಸೌಲಭ್ಯ ಹಾಗೂ ಮಾಹಿತಿಗಾಗಿ ಯಾರನ್ನು ಸಂಪರ್ಕಿಸಬೇಕು.?
  • ಹತ್ತಿರದ ಸರ್ಕಾರಿ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು, ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಆಸ್ಪತ್ರೆಗಳಲ್ಲಿನ ಆರೋಗ್ಯ ಮಿತ್ರರನ್ನು ಸಂಪರ್ಕಿಸಬಹುದು.
  • ಆರೋಗ್ಯ ಸಹಾಯವಾಣಿ 104, ಟೋಲ್ ಫ್ರೀ ಸಂಖ್ಯೆ: 1800 425 8330
  • ವೆಬ್ ಸೈಟ್: www.sast.gov.in, www.arogya.karnataka.gov.in ಮೂಲಕ ಪಡೆಯಬಹುದು.

ಅಷ್ಟೇ ಅಲ್ಲದೆ ಈ ಕಾರ್ಯಾಗಾರದಲ್ಲಿ ತಾಯಿಯ ಆರೋಗ್ಯ ಕಾರ್ಯಕ್ರಮಗಳು, ಮಕ್ಕಳ ಆರೋಗ್ಯ ಕಾರ್ಯಕ್ರಮ ಹಾಗೂ ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ರೋಗವಾಹಕ ಆಶ್ರಿತ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯ, ಮೆದುಳು ಜ್ವರದ ಅಂಕಿ ಅಂಶಗಳನ್ನು ತಿಳಿಸಿದರು. ಜಿಲ್ಲೆಯಲ್ಲಿ ಮಲೇರಿಯಾ ಸೋಂಕಿತರ ಸಂಖ್ಯೆ 3 ಇದ್ದು, ಡೆಂಗ್ಯೂ ಸಂಚಿತ ಸೋಂಕಿತರ ಸಂಖ್ಯೆ 187 ಇದೆ ಎಂದರು. ಜಿಲ್ಲೆಯ ಕಡೂರು ತಾಲೂಕಿನಲ್ಲಿ 47, ತರೀಕೆರೆ ಯಲ್ಲಿ 19, ಚಿಕ್ಕಮಗಳೂರು ತಾಲೂಕು ಗಳಲ್ಲಿ ಹೆಚ್ಚು  73 ಡೆಂಗ್ಯೂ ಪ್ರಕರಣಗಳಿವೆ ಎಂದ ಅವರು ಬೇರೆಲ್ಲ ಪ್ರಕರಣ ಸಂಖ್ಯೆ ಕಡಿಮೆ ಇದೆ ಎಂದು ಮಾಹಿತಿ ನೀಡಿದರು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!