May 3, 2024

MALNAD TV

HEART OF COFFEE CITY

ಆನೆ ದಾಳಿಗೆ ವ್ಯಕ್ತಿ ಸಾವು, ಕಾಡಿನಲ್ಲಿ ಮೃತದೇಹವನ್ನ 1 ಕಿ.ಮೀ. ಎಳೆದೊಯ್ದ ಕಾಡಾನೆ

1 min read

 

 

ಚಿಕ್ಕಮಗಳೂರು. ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನ 52 ವರ್ಷದ ಆನಂದ್ ದೇವಾಡಿಗ ಎಂದು ಗುರುತಿಸಲಾಗಿದೆ. ಮೃತ ಆನಂದ್ ದೇವಾಡಿಗ ಮನೆಯ ಹಿಂಭಾಗದಲ್ಲಿ ಹಸುವನ್ನು ಹುಡುಕಿಕೊಂಡು ಹೋದಾಗ ಈ ದುರ್ಘಟನೆ ಸಂಭವಿಸಿದೆ. ದಾಳಿ ಮಾಡಿದ ಕಾಡಾನೆ ಸುಮಾರು ಒಂದು ಕಿ.ಮೀ ಗಿಂತಲೂ ಹೆಚ್ಚು ದೂರ ಮೃತ ದೇಹವನ್ನು ಕಾಡಿನಲ್ಲಿ ಎಳೆದೊಯ್ದಿದೆ. ಕಾಡಿನ ಒಳಗೆ ಮೃತ ಆನಂದ್ ಅವರ ದೇಹದ ಅಂಗಾಗಗಳು ಕಾಡಿನ ಸುಮಾರು ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಅಲ್ಲಲ್ಲೆ ಹರಡಿ ಬಿದ್ದಿವೆ. ಮೃತದೇಹ ಇರುವ ಜಾಗಕ್ಕೂ ಚಪ್ಪಲಿ ಇರುವ ಜಾಗಕ್ಕೂ ಸುಮಾರು ಒಂದು ಕಿ.ಮೀ ದೂರವಿದೆ. ಅಷ್ಟೆ ಅಲ್ಲದೆ ತಲೆ ಮೆದುಳು, ಮೂಳೆಯೂ ಒಂದೊಂದು ಜಾಗದಲ್ಲಿ ಬಿದ್ದಿದೆ. ಮೃತದೇಹವನ್ನ ಕಾಡಿನಲ್ಲಿ ಎಳೆದು ತಂದಿರುವುದರಿಂದ ಕಾಡಿನ ಮರಗಿಡಿಗಳಿಗೆ ಸಿಲುಕಿ ಮೃತದೇಹದ ಮೇಲೆ ಯಾವುದೇ ಬಟ್ಟೆ ಇಲ್ಲದಂತಾಗಿದೆ. ಛಿದ್ರವಾಗಿರುವ ಮೃತದೇಹವನ್ನ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

 

 

ಘಟನೆ ನಿನ್ನೆ ಸಂಜೆಯೂ ನಡೆದರೂ ಬೆಳಗ್ಗೆವರೆಗೂ ಯಾರಿಗೂ ಮಾಹಿತಿ ಇರಲಿಲ್ಲ. ಮನೆಯವರು ಆನಂದ್ ಎಲ್ಲೋ ಹೋಗಿದ್ದಾರೆ. ಬರುತ್ತಾರೆ ಎಂದು ಸುಮ್ಮನಾಗಿದ್ದಾರೆ. ಆದರೆ, ಬೆಳಗ್ಗೆ ಎಲ್ಲೂ ಇಲ್ಲದಾಗ ಸ್ಥಳಿಯರು ಎರಡು ಗುಂಪುಗಳಾಗಿ ಮನೆ ಹಿಂದಿನ ಕಾಡಿನಲ್ಲಿ ಹುಡುಕಾಡಿದ್ದಾರೆ. ಆಗ ಮೃತದೇಹ ಪತ್ತೆಯಾಗಿದೆ. ಬೆಳಗ್ಗೆ ಸ್ಥಳಿಯರು ಸ್ಥಳಕ್ಕೆ ಬರುವವರೆಗೂ ಆನೆ ಮೃತದೇಹವಿದ್ದ ಸ್ಥಳದಲ್ಲೇ ಇತ್ತಂತೆ. ಸ್ಥಳಿಯರು ಬಂದ ಬಳಿಕ ಆನೆ ಹೋಗಿದೆ. ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಾಳಿ ಮಿತಿಮೀರಿದೆ. ಕಳೆದೊಂದು ವಾರದಿಂದ 13 ಕಾಡಾನೆಗಳ ಹಿಂಡು ತಾಲೂಕಿನಾದ್ಯಂತ ಅಲ್ಲಲ್ಲೇ ದಾಂದಲೆ ನಡೆಸುತ್ತಿವೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕೂಡ ಪಟಾಕಿ ಸಿಡಿಸುವುದ ಬಿಟ್ಟು ಅಧಿಕಾರಿಗಳು ಏನೂ ಮಾಡುವುದಿಲ್ಲ ಎಂದು ಸ್ಥಳಿಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕಳೆದ ಹಲವು ತಿಂಗಳಿಂದ ಒಂಟಿ ಸಲಗದ ಕಾಟ ಬಹಳಷ್ಟಿದೆ. ಜನ ಓಡಾಡಲು ಹೆದರುತ್ತಿದ್ದಾರೆ. ಕೂಡಲೇ ಆನೆಯನ್ನ ಸ್ಥಳಾಂತರಿಸಿ ಮೃತ ಆನಂದ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!