April 29, 2024

MALNAD TV

HEART OF COFFEE CITY

ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್, ಇಬ್ಬರು ಮಕ್ಕಳ ಸ್ಥಿತಿ ಗಂಭೀರ

1 min read

 

ಚಿಕ್ಕಮಗಳೂರು : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಓರ್ವ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲು ದುಗ್ಲಾಪುರ ಗ್ರಾಮದಲ್ಲಿ ನಡೆದಿದೆ. ಇನ್ನು ಮತ್ತೊಬ್ಬ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದ್ದ ವಿದ್ಯಾರ್ಥಿಯನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ ಓವರ್ ಸ್ಪೀಡ್ ನಿಂದು ಚಾಲಕನು ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯಲ್ಲಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹಳೆದಿದೆ. 15 ವರ್ಷದ ತುಳಸಿ ಸಾವನಪ್ಪಿದ್ದಾಳೆ. ನಿವೇದಿತ
ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಐವರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಡಿಕ್ಕಿ ರಸಕ್ಕೆ ಮನೆಯ ಮುಂಭಾಗದ ಮೇಲ್ಚಾವಣಿ ಜಖಂಗೊಂಡಿದೆ. ಬಸ್ ಏಕಾಏಕಿ ರಸ್ತೆ ನಿಲ್ದಾಣ ಹಾಗೂ ಮನೆಗಳತ್ತ ನುಗ್ಗಿದ್ದರಿಂದ ಬಸ್ ನಿಯಂತ್ರಣ ಕಳೆದುಕೊಂಡಿರುವುದನ್ನು ಗಮನಿಸಿದ ಪ್ರಯಾಣಿಕರು ಚೆಲ್ಲಾಪಿಲ್ಲಿ ಯಾಗಿ ಓಡಿದ್ದಾರೆ.
ಖಾಸಗಿ ಬಸ್ ಗಳು ಅತಿ ವೇಗದಿಂದ ಚಲಾಯಿಸುತ್ತಾರೆ ಇದರಿಂದ ಅನಾಹುತಗಳು ಸಂಭವಿಸುತ್ತಿದ್ದು ಖಾಸಗಿ ಬಸ್ಗಳ ವೇಗಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನಾಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!