May 9, 2024

MALNAD TV

HEART OF COFFEE CITY

ಗ್ರಾಮ ಗ್ರಾಮಗಳಲ್ಲೂ ರಾಮನಾಮ ಜಪಿಸಲು ಕಾರ್ಯಕ್ರಮ

1 min read

ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ಜನವರಿ 22 ರಂದು ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಈ ಅಭೂತಪೂರ್ವ ಸಂಭ್ರಮದಲ್ಲಿ ಎಲ್ಲರೂ ಭಾಗಿಯಾಗುವ ನಿಟ್ಟಿನಲ್ಲಿ ಪ್ರತಿ ಗ್ರಾಮದಲ್ಲಿರುವ ಮಂದಿರದಲ್ಲಿ ಅಯೋಧ್ಯೆಯ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಸಂಯೋಜಕ ಮಲ್ಲಿಕಾರ್ಜುನ್ ರಾವ್ ತಿಳಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜ. 22 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.00 ರ ಮಧ್ಯದಲ್ಲಿ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ದೂರದರ್ಶನ ಅಥವಾ LED ಪರದೆ ಅಥವಾ ಪ್ರೊಜೆಕ್ಟರ್ ಹಾಗೂ ಯಾವುದೇ ತರಹದ ಪರದೆಯಲ್ಲಿ ಅಯೋಧ್ಯೆಯ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ವ್ಯವಸ್ಥೆಯನ್ನು ಮಾಡಲಾಗುವುದು ಎಂದು ತಿಳಿಸಿದರು.
ರಾಮ ಮಂದಿರ ಪ್ರತಿಷ್ಠಾಪನೆ ಸಮಯದಲ್ಲಿ ವಿವಿಧ ದೇವತೆಗಳ ಭಜನೆ, ಕೀರ್ತನೆ, ಪೂಜೆ, ಆರತಿ, ಶ್ರೀರಾಮ ಜಪ ನಡೆಯಲಿದ್ದು, ಆ ಸಮಯದಲ್ಲಿ ಎಲ್ಲರೂ ಶ್ರೀರಾಮ ಜಯರಾಮ ಜಯಜಯರಾಮ” ವಿಜಯ ಮಹಾಮಂತ್ರವನ್ನು ಸಾಮೂಹಿಕವಾಗಿ 108 ಬಾರಿ ಜಪ ಮತ್ತು ಇದರ ಜೊತೆಗೆ ಹನುಮಾನ್ ಚಾಲಿಸಾ, ಸುಂದರಕಾಂಡ ಪಾರಾಯಣ, ರಾಮರಕ್ಷಾಸ್ತೋತ್ರದ ಪಠಣಗಳನ್ನು ಮಾಡಲಾಗುವುದು. ನೀವುಗಳು ಭಾಗಿಯಾಗಿ ಪ್ರಭು ಶ್ರೀರಾಮಚಂದ್ರನ ಸಂಪೂರ್ಣ ಕೃಪೆಗೆ ಪಾತ್ರರಾಗಿ ಎಂದು ಮನವಿ ಮಾಡಿದರು.

ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ನ ಚಿಕ್ಕಮಗಳೂರು ಜಿಲ್ಲಾ ಸಹ ಸಂಚಾಲಕ ರಂಗನಾಥ್ ಮಾತನಾಡಿ, ಶ್ರೀರಾಮ ಮಂದಿರದ ನಿಮಿತ್ತ ಪ್ರತಿ ಮನೆಯಲ್ಲಿ ದೇಣಿಗೆ ಸಂಗ್ರಹಣೆ ಮಾಡಲಾಗಿತ್ತು. ಶ್ರೀ ರಾಮನ ಕಾರ್ಯಕ್ರಮದಲ್ಲಿ ಎಲ್ಲರನ್ನ ತೊಡಗಿಸಿಕೊಳ್ಳಲು ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಮಂದಿರವು ಮಂತ್ರಾಕ್ಷತೆಯನ್ನು ರಾಜ್ಯ ಹಾಗೂ ಜಿಲ್ಲೆಗಳಿಗೆ ಕಳುಹಿಸಿಕೊಟ್ಟಿದೆ.  ರಾಮನ ಕಾರ್ಯಕ್ರಮದಲ್ಲಿ ಕೈಜೋಡಿಸಿ ಎಂದು ಮನವಿ ಮಾಡಲಾಗುವುದು ಎಂದರು.

ಈ ರೀತಿಯ ಕಾರ್ಯಕ್ರಮ ಮಾಡುತ್ತಿರುವ ಉದ್ದೇಶವೇನೆಂದರೆ ದೇಶದ ಎಲ್ಲಾ ಜನರು ಆ ದಿನದಂದು ರಾಮಮಂದಿರಕ್ಕೆ ತೆರಳಲು ಸಾಧ್ಯವಾಗುವುದಿಲ್ಲ ಈ ನಿಟ್ಟಿನಲ್ಲಿ ನಮ್ಮ ಹತ್ತಿರದ ರಾಮಮಂದಿರಕ್ಕೆ ತೆರಳಿ ರಾಮ ಜಪ ಪೂಜೆ ಹೋಮ ರಾಮನ ಈ ಕಾರ್ಯಕ್ಕೆ ಇಡೀ ಹಿಂದೂ ಸಮಾಜ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!