May 18, 2024

MALNAD TV

HEART OF COFFEE CITY

ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿ ಜೀಪ್ ಪಲ್ಟಿ, ನಾಲ್ವರು ಅಪಾಯದಿಂದ ಪಾರು

1 min read

ಮಳೆ ಹಾಗೂ ಮಂಜು ಕವಿದ ವಾತಾವರಣದಿಂದ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಜೀಪೊಂದು ಗುಡ್ಡದ ಮೇಲಿನ ಒಂದು ರಸ್ತೆಯಿಂದ ಮತ್ತೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಕ್ಕೆ ಬಂದಿದ್ದ ಮಂಡ್ಯ ಜಿಲ್ಲೆ ನೋಂದಣಿ ಹೊಂದಿದ್ದ ಬೊಲೆರೋ ಗಾಡಿ ಮುಳ್ಳಯ್ಯನಗಿರಿಯಿಂದ ಚಿಕ್ಕಮಗಳೂರು ನಗರಕ್ಕೆ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ. 

ನಿನ್ನೆ ಸಂಜೆ ವೇಳೆ ಮುಳ್ಳಯ್ಯನಗಿರಿ ಭಾಗದಲ್ಲಿ ಬಿಟ್ಟು-ಬಿಟ್ಟು ಭಾರೀ ಮಳೆ ಸುರಿದಿದೆ. ಜೊತೆಗೆ ತೀವ್ರವಾದ ಮಂಜು ಕೂಡ ಇದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಜೀಪಿನಲ್ಲಿ ನಾಲ್ಕು ಜನ ಪ್ರವಾಸಿಗರಿದ್ದು ಅದೃಷ್ಟವಶಾತ್ ಯಾರಿಗೂ ದೊಡ್ಡ ಪ್ರಮಾಣದ ನೋವು ಸಂಭವಿಸಿಲ್ಲ. ಎಲ್ಲರಿಗೂ ಸಣ್ಣ-ಪುಟ್ಟ ಗಾಯಗಳಾಗಿದ್ದು ದೊಡ್ಡ ಪ್ರಮಾಣದ ಅಪಾಯದಿಂದ ಪಾರಾಗಿದ್ದಾರೆ. ಮುಳ್ಳಯ್ಯನಗಿರಿಯ ಹಾವು-ಬಳುಕಿನ ಮೈಕಟ್ಟಿನ ರಸ್ತೆಯಲ್ಲಿ ಯೂ ಟರ್ನ್ ಆಕಾರದ ರಸ್ತೆಯಲ್ಲಿ ಗಾಡಿಯನ್ನ ಟರ್ನ್ ಮಾಡುವಾಗ ಸ್ಟೇರಿಂಗ್ ರಾಡ್ ಕಟ್ ಆಗಿ ಗಾಡಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಆದರೆ, ಸುಮಾರು 100-150 ಅಡಿ ಎತ್ತರದಿಂದ ಗುಡ್ಡದ ಮೇಲಿನ ರಸ್ತೆಯಿಂದ ಕೆಳಗೆ ಉರುಳಿ ಬಿದ್ದು ಅದೇ ಗುಡ್ಡ ಕೆಳಭಾಗದ ಮತ್ತೊಂದು ರಸ್ತೆ ಮೇಲೆ ಬಿದ್ದಿದೆ. ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!