May 19, 2024

MALNAD TV

HEART OF COFFEE CITY

ಉಚಿತ ಲಸಿಕೆ ಆದೇಶಕ್ಕೆ ಸುಪ್ರೀಂ ಕೋರ್ಟ್ ಗೆ ಕೃತಜ್ಞನತೆ ಅರ್ಪಿಸಿದ ಯುವ ಕಾಂಗ್ರೆಸ್

1 min read

ಚಿಕ್ಕಮಗಳೂರು: ದೇಶದ ಪ್ರತಿಯೊಬ್ಬ ಪ್ರಜೆಗೂ ಉಚಿತ ಲಸಿಕೆ ನೀಡಬೇಕು ಎಂದು ಆದೇಶಿಸಿರುವ ಸುಪ್ರೀಂ ಕೋರ್ಟ್ಗೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಘೋಷಣೆಗಳನ್ನು ಕೂಗುವ ಮೂಲಕ ಧನ್ಯವಾದಗಳನ್ನು ತಿಳಿಸಿದರು.
ಸುಪ್ರೀಂ ಕೋರ್ಟ್ಗೆ ಕೃತಜ್ಞತೆಗಳು ಎಂಬ ಬ್ಯಾನರ್, ಪ್ಲೇ ಕಾರ್ಡ್ಗಳನ್ನು ಪ್ರದರ್ಶಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರು ಸುಪ್ರೀಂ ಕೋರ್ಟ್ ಕೋವಿಡ್-೧೯ ವಿಚಾರದಲ್ಲಿ ತೆಗೆದುಕೊಂಡಿರುವ ದೃಢವಾದ ನಿಲುವು, ಆದೇಶಕ್ಕೆ ಮೆಚ್ಚಿಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮAತ್ ಮಾತನಾಡಿ, ನಮ್ಮ ಪಕ್ಷದ ರಾಷ್ಟಿçÃಯ ನಾಯಕರಾದ ರಾಹುಲ್ ಗಾಂಧಿ, ಸೋನಿಯಾಗಾಂಧಿ, ಮನಮೋಹನ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಕೋವಿಡ್-೧೯ ಬಗ್ಗೆ ಕೊಟ್ಟ ಆರೋಗ್ಯಪೂರ್ಣವಾದ ಸಲಹೆಗಳನ್ನು ನಿರ್ಲಕ್ಷಿಸಿದ ಪರಿಣಾಮವಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮುಗ್ಗರಿಸಿ ಸಾವು ನೋವುಗಳು ಹೆಚ್ಚಾಗಿ ಜನರು ಸಂಕಷ್ಟಕ್ಕೆ ಸಿಲುಕಲು ಕಾರಣವಾಯಿತು ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರಕ್ಕೆ ಕೋವಿಡ್ ನಿಯಂತ್ರಣದಲ್ಲಿ ಸಂಪೂರ್ಣವಾಗಿ ವಿಫಲವಾದ ಸಂದರ್ಭಕ್ಕೆ ಅನುಗುಣವಾಗಿ ದೇಶದ ಸರ್ವೋಚ್ಚ ನ್ಯಾಯಾಲಯ ಜನರಿಗೆ ಧ್ವನಿಯಾಗಿ ನಿಂತುಕೊAಡಿತು. ಆಕ್ಸಿಜನ್ ಕೊರತೆಯಿಂದ ಜನ ಸತ್ತಾಗ ಸುಪ್ರೀಂ ಕೋರ್ಟ್ ಗಟ್ಟಿ ನಿಲುವು ತೆಗೆದುಕೊಂಡಿತು. ಲಸಿಕೆ ಕಾರ್ಯಕ್ಕಾಗಿ ೩೫ ಸಾವಿರ ಕೋಟಿ ರೂ.ಗಳನ್ನು ಹೇಗೆ ? ಯಾವ ರೀತಿಯಲ್ಲಿ ಖರ್ಚು ಮಾಡುತ್ತೀರಿ ಎಂದು ಚಾಟಿ ಬೀಸಿತು. ದೇಶದ ಪ್ರತಿಯೊಬ್ಬ ಪ್ರಜೆಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು ಎಂದು ಆದೇಶಿಸಿತು. ಈಗ ಮೃತ ಕುಟುಂಬಗಳಿಗೆ ಪರಿಹಾರವನ್ನು ತುರ್ತಾಗಿ ವಿತರಿಸಬೇಕು ಎಂದು ನಿರ್ದೇಶನ ನೀಡುವ ಮೂಲಕ ಸುಪ್ರೀಂ ಕೋರ್ಟ್ ಜನಪರವಾಗಿ ನಿಂತಿದೆ. ಅದಕ್ಕೆ ದೇಶದ ಪ್ರತಿಯೊಬ್ಬ ಜನರು ಕೃತಜ್ಞರಾಗಿರಬೇಕು. ಕಾಂಗ್ರೆಸ್ ಪಕ್ಷ ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ಗೆ ಕೃತಜ್ಞತೆಯನ್ನು ಸಲ್ಲಿಸುತ್ತಿದೆ ಎಂದು ಕೋರ್ಟ್ ಆದೇಶಗಳನ್ನು ಕೊಂಡಾಡಿದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ, ಬಡವರ ಹಸಿವು ನೀಗಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದ ಸಂದರ್ಭದಲ್ಲಿ ಕ್ಯಾಂಟೀನ್‌ಗೆ ಇಂದಿರಾಗಾAಧಿ ಫೋಟೋ ಹಾಕಿದ್ದಾಗ ಇಲ್ಲಿನ ಶಾಸಕ ಸಿ.ಟಿ.ರವಿ ಅವರು ಅವರ ಅಪ್ಪನ ಮನೆಯ ದುಡ್ಡಿನಿಂದ ಕ್ಯಾಂಟೀನ್ ಮಾಡಿಲ್ಲ ಎಂದು ಟೀಕಿಸಿದ್ದರು. ಈಗ ಕೋವಿಡ್ ಲಸಿಕೆ ಪ್ರಮಾಣ ಪತ್ರಕ್ಕೆ ಪ್ರಧಾನಿ ಮೋದಿ ಅವರ ಫೋಟೋ ಹಾಕಲಾಗಿದೆ. ಅದು ಅವರ ಅಪ್ಪನ ಮನೆಯ ದುಡ್ಡಿನಿಂದ ಹಾಕಲಾಗಿದೆಯೇ ಎಂಬುದನ್ನು ಸಿ.ಟಿ.ರವಿ ಅವರು ಹೇಳಬೇಕು ಎಂದು ಪ್ರಶ್ನಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ ಜನರು ಬಾಯಿಗೆ ಮಣ್ಣು ಹಾಕಿಕೊಳ್ಳುತ್ತಿದ್ದಾರೆ ಎಂದು ರಾಜ್ಯ, ಕೇಂದ್ರ ಸರ್ಕಾರಗಳನ್ನು ಛೇಡಿಸಿದ ಅವರು, ಕೋವಿಡ್‌ಗೆ ಸಂಬAಧಿಸಿದAತೆ ಸುಪ್ರೀಂ ಕೋmð ಮಧ್ಯ ಪ್ರವೇಶ ಮಾಡುವ ಮೂಲಕ ದೇಶದ ಜನರಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸ ಮಾಡಿದೆ ಎಂದು ಕೃತಜ್ಞತೆ ಸಮರ್ಪಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಹಿಲ್ ಶರೀಫ್ ಮಾತನಾಡಿ, ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ಕೇಂದ್ರ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ. ಸರ್ಕಾರಗಳ ನಿರ್ಲಕ್ಷö್ಯದಿಂದಾಗಿ ಜನರು ಪ್ರಾಣ ಕಳೆದುಕೊಳ್ಳಬೇಕಾಯಿತು. ಇಂತಹ ಸರ್ಕಾರಗಳು ಇರಬಾರದು ಎಂದು ಹೇಳಿದರು.
ಕೆಪಿಸಿಸಿ ಹಾಸನ ಜಿಲ್ಲೆಯ ಉಸ್ತುವಾರಿ ಉಮಾ ಐ.ಬಿ.ಶಂಕರ್ ಮಾತನಾಡಿ, ನಮ್ಮ ಪಕ್ಷದ ರಾಹುಲ್ ಗಾಂಧಿಯವರು ಕೊವಿಡ್ ಬಗ್ಗೆ ಹಗಲು ರಾತ್ರಿ ಎನ್ನದೆ ಕೆಲಸ ಮಾಡಿದ್ದಾರೆ. ಅವರ ಹೋರಾಟದ ಫಲವಾಗಿ ಸರ್ಕಾರಗಳು ಎಚ್ಚೆತ್ತುಕೊಂಡು ಒಂದಿಷ್ಟು ಕೆಲಸ ಮಾಡಿವೆ. ಇನ್ನೂ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶದ ಮೇಲೆ ಆದೇಶ ನೀಡುವ ಮೂಲಕ ಮಂಗಳಾರತಿ ಮಾಡಿದೆ ಎಂದು ಕೃತಜ್ಞತೆ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ದೇಶದ ಸರ್ವೋಚ್ಚ ನ್ಯಾಯಾಲಯದ ಆದೇಶಗಳಿಂದಾಗಿ ಜನರ ಪ್ರಾಣಗಳು ರಕ್ಷಣೆಯಾಗಿವೆ. ಜೊತೆಗೆ ಸುಪ್ರೀಂ ಕೋರ್ಟ್ ನಮ್ಮ ಜೊತೆ ಇದೆ ಎಂಬ ವಿಶ್ವಾಸ ಮೂಡಿದೆ ಎಂದು ಕೃತಜ್ಞತೆ ಸಲ್ಲಿಸಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ಕುಮಾರ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುಭಾನ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉಮೇಶ್, ನಗರ ಎಸ್ಸಿ ಘಟಕ ಅಧ್ಯಕ್ಷ ಎಚ್.ಎಸ್.ಜಗದೀಶ್, ಆವುತಿ ಹೋಬಳಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ಧಾಂತ್, ಹಿರೇಮಗಳೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ಎಚ್.ಸಿ.ಗಂಗಾಧರ್, ತಾಲೂಕು ಯುವ ಕಾಂಗ್ರೆಸ್ ಉಪಾಧ್ಯಕ್ಷ ಎಚ್.ಇ.ರಾಜಶೇಖರ್, ವಾರ್ಡ್ ಸಮಿತಿ ಅಧ್ಯಕ್ಷ ಎಚ್.ಆರ್.ಗಂಗಾಧರ್, ಯುವ ಮುಖಂಡರಾದ ಆಕಾಶ್, ದೃವ ಇತರರು ಹಾಜರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,

https://www.youtube.com/channel/UCmBISI2sn_0gamb44UFj-vQ

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

https://drive.google.com/file/d/1NAncco3HJMY9rgMxE4KXBh69G-O67_A_/view?usp=sharing

 

 

Credits: Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!