May 1, 2024

MALNAD TV

HEART OF COFFEE CITY

ಡಿ.ವಿ ಗಿರೀಶ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಬಂಧನ

1 min read

ಚಿಕ್ಕಮಗಳೂರು : ಪರಿಸರವಾದಿ ಡಿ.ವಿ.ಗಿರೀಶ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸರಿಂದ 7 ಆರೋಪಿಗಳನ್ನು ಬಂಧಿಸಲಾಗಿದ್ದು, ಕಾರ್ಯಾಚರಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್ ಅಕ್ಷಯ್ ನಗದು ಬಹುಮಾನ ನೀಡಿ ಗೌರವಿಸಿದರು.
ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ತಾಲೂಕಿನ ಕಂಬಿಹಳ್ಳಿಯಲ್ಲಿ 7 ಜನರ ತಂಡವೊಂದು ಕುಡಿದ ಅಮಲಿನಲ್ಲಿ ತಂದೆ ಎದುರೆ ಬಾಲಕಿಯನ್ನು ಚುಡಾಯಿಸಿದ್ದರು. ಇದನ್ನು ಪ್ರಶ್ನಿಸಿದ ಪರಿಸರವಾದಿ ಡಿ.ವಿ.ಗಿರೀಶ್ ಹಾಗೂ ಅವರ ತಂಡದ ಗಾಡಿಯನ್ನು ಹಿಂಭಾಲಿಸಿಕೊಂಡು ಬಂದ ದುಷ್ಕರ್ಮಿಗಳ ತಂಡ ಇವರುಗಳ ಮೇಲೆ ದೈಹಿಕ ಹಲ್ಲೆಯನ್ನು ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡ ಗ್ರಾಮಾಂತರ ಪೊಲೀಸರು, ಪ್ರಕರಣ ನಡೆದ 48 ಗಂಟೆಯಲ್ಲಿ ಕೊಡಗು, ಬಳ್ಳಾರಿ, ಹಾಸನ, ಬೆಂಗಳೂರಲ್ಲಿ ತಲೆಮರೆಸಿಕೊಂಡಿದ್ದ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷಾಧಿಕಾರಿ ಎಂ.ಹೆಚ್ ಅಕ್ಷಯ್ ತಿಳಿಸಿದರಲ್ಲದೆ, ಆರೋಪಿಗಳನ್ನು ಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸರಿಗೆ ನಗದು ಬಹುಮಾನ ನೀಡಿ ಗೌರವಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!