May 15, 2024

MALNAD TV

HEART OF COFFEE CITY

ಹೆಡ್ ಕಾನ್ಸ್‌ಟೇಬಲ್ ಮಗಳ ಸಾಧನೆ : ಹರ್ಡಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ಅನುಶ್ರೇಯ

1 min read

ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ ಸ್ಟೇಬಲ್ ಬಿ.ಎಸ್ ಚಂದ್ರೇಗೌಡ ರವರ ಮಗಳಾದ ಕು. ಅನುಶ್ರೇಯಾ ಬಿ.ಸಿ ಇತ್ತೀಚೆಗೆ ಮುಂಬೈನಲ್ಲಿ ನಡೆದ 52ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟದಲ್ಲಿ 100 ಮೀ ಹರ್ಡಲ್ಸ್ ನಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ಕು. ಅನುಶ್ರೇಯಾ ಬಿ.ಸಿ ಚಿಕ್ಕಮಗಳೂರು ನಗರದಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಜುಲೈ-2023 ರಲ್ಲಿ ಬೆಂಗಳೂರಿನಲ್ಲಿ ನಡೆದ 52ನೇ ಕೆವಿಎಸ್ ರಾಜ್ಯ ಕ್ರೀಡಾಕೂಟದಲ್ಲಿ 100 ಮೀ ಹರ್ಡಲ್ಸ್ ನಲ್ಲಿ ಚಿನ್ನದ ಪದಕ ಪಡೆದಿದ್ದು, ಕ್ರೀಡಾಕೂಟದಲ್ಲಿ ಪದಕ ಪಡೆದು ರಾಜ್ಯ, ಜಿಲ್ಲೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾಳೆ.

 

ಬಾಲಕಿಯ ಸಾಧನೆಯನ್ನು ಪೊಲೀಸ್ ಅಧೀಕ್ಷಕರಾದ ಡಾ. ವಿಕ್ರಮ್ ಅಮಟೆ ಶ್ಲಾಘಿಸಿದ್ದಾರೆ. ಜಿಲ್ಲಾ ಪೊಲೀಸ್ ಕಚೇರಿಗೆ ಬಾಲಕಿಯನ್ನು ಅಭಿನಂದಿಸಿದ ಎಸ್ಪಿ ಮತ್ತಷ್ಟು ಹೆಚ್ಚಿನ ಸಾಧನೆ ಮಾಡುವಂತೆ ಪ್ರೊತ್ಸಾಹದ ನುಡಿಗಳನ್ನು ಆಡಿದ್ದಾರೆ. ಅಲ್ಲದೇ ಹೆಡ್ ಕಾನ್ಸ್‌ಟೇಬಲ್ ಚಂದ್ರೇಗೌಡರಿಗೆ ಮಗಳ ಉಜ್ವಲ ಭವಿಷ್ಯಕ್ಕಾಗಿ ನೀವು ಜೊತೆಗಿರಬೇಕು ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!