May 13, 2024

MALNAD TV

HEART OF COFFEE CITY

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಿ.ಟಿ ರವಿ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಾಯ..!

1 min read

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಮಾಜಿ ಶಾಸಕ ಸಿ.ಟಿ ರವಿ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಾಯ ಬಲವಾಗಿ ಕೇಳಿಬರುತ್ತಿದೆ. ಪಕ್ಷದ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಕಾರ್ಯಕರ್ತರ ಬೇಡಿಕೆಗೆ ಪ್ರತಿಕ್ರಿಯಿಸಿದ ರವಿ ಎಲ್ಲವನ್ನೂ ಪಕ್ಷ ನಿರ್ಧರಿಸುತ್ತದೆ ಎಂದಿದ್ದಾರೆ.

ಲೋಕಸಭಾ ಚುನಾವಣೆಗೆ ಎಲ್ಲೆಡೆ ತಯಾರಿ ನಿಧಾನಗತಿಯಲ್ಲಿ ಆರಂಭಗೊಂಡ ಬೆನ್ನಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಯಾರು ಸ್ಪರ್ಧಿಸುತ್ತಾರೆ ಎಂಬ ಕುತೂಹಲ ದಿನೇ ದಿನೆ ಹೆಚ್ಚತೊಡಗಿದೆ. ಶೋಭಾ ಕರಂದ್ಲಾಜೆ ಕ್ಷೇತ್ರ ಬದಲಿಸುತ್ತಾರೆ ಎಂಬ ಗುಸುಗುಸು ಕೇಳಿ ಬರುತ್ತಿರುವ ಬೆನ್ನಲ್ಲೇ ಮಾಜಿ ಶಾಸಕ ಸಿ.ಟಿ ರವಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿ ಎಂದು ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ವಿವಿಧ ಮಂಡಲಗಳ ಸಭೆಯಲ್ಲಿ ಈ ಕೂಗು ಕೇಳಿ ಬಂದವು. ರಾಮಮಂದಿರ ಲೋಕಾರ್ಪಣೆ ಹಿನ್ನೆಲೆ ಅಯೋಧ್ಯೆಯಿಂದ ಆಗಮಿಸಿರುವ ಮಂತ್ರಾಕ್ಷಿಕೆ ಹಾಗೂ ದತ್ತಜಯಂತಿ ಕುರಿತು ಬಿಜೆಪಿ ಪಕ್ಷದ ಕಚೇರಿಯಲ್ಲಿ ಇಂದು ಸಂಘ ಪರಿವಾರದ ಸಭೆ. ಈ ನಡುವೆ ಸಭೆಯಲ್ಲಿ ಸಿ.ಟಿ ರವಿ ಎಂ.ಪಿ ಕ್ಷೇತ್ರಕ್ಕೆ ಸ್ಪರ್ಧೆ ಮಾಡಲಿ ಎಂದು ಬಿಜೆಪಿ ಕಾರ್ಯಕರ್ತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ ರವಿ ಪಕ್ಷದ ಯಾವುದೇ ನಿರ್ಧಾರಕ್ಕೆ ತಾವು ಬದ್ದ ಎನ್ನುವ ಮೂಲಕ ಪರೋಕ್ಷವಾಗಿ ಸ್ಪರ್ಧೆಗೆ ಸಿದ್ದ ಎಂಬ ಸುಳಿವು ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!