May 19, 2024

MALNAD TV

HEART OF COFFEE CITY

ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಎಲ್ಲಾ ವರ್ಗದವರ ಏಳಿಗೆ ಆಗಿತ್ತು – ಹೆಚ್.ಹೆಚ್.ದೇವರಾಜ್

1 min read

ಚಿಕ್ಕಮಗಳೂರು-ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ರೈತರ ಸಾಲ ಮನ್ನಾ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಬಡ ಕೂಲಿ ಕಾರ್ಮಿಕರಿಗೆ ಅನುಕೂಲವಾಗಲೆಂದು ಇಂದಿರಾ ಕ್ಯಾಂಟೀನ್ ತೆರೆದು ಎಲ್ಲಾ ವರ್ಗಗಳ ಪ್ರೀತಿ, ವಿಶ್ವಾಸ ಪಡೆದಿದೆ, ಈ ಬಾರಿ ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ ಎಂದು ಕೆ.ಪಿ.ಸಿ.ಸಿ ರಾಜ್ಯ ವಕ್ತಾರ ಹೆಚ್.ಹೆಚ್.ದೇವರಾಜ್ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ನೂತನವಾಗಿ ನೇಮಕಗೊಂಡಿರುವ ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಎಲ್ಲಾ ವರ್ಗದವರ ಅಭಿವೃದ್ಧಿಗೆ ಶ್ರಮಿಸಿ ಎಲ್ಲರ ಪ್ರೀತಿ, ವಿಶ್ವಾಸ ಪಡೆದಿತ್ತು, ಮತ್ತೋಮ್ಮೆ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಮುಖ್ಯ ಮಂತ್ರಿಗಳಾಗಿ ಸಿದ್ಧರಾಮಯ್ಯ ರವರು ಅತ್ಯಂತ ಜನಪ್ರಿಯ ಕಾರ್ಯಕ್ರಮಗಳನ್ನು ಕಳಂಕ ರಹಿತವಾಗಿ ಮಾಡಿದ್ದರು, ವೀರಪ್ಪ ಮೊಹ್ಲಿ ರವರ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಆಗಲೆಂದು ಸಿಇಟಿ ಪರೀಕ್ಷೆಯನ್ನು ಜಾರಿಗೆ ತಂದರು, ದೇವರಾಜು ಅರಸು ರವರ ಕಾಲದಲ್ಲಿ ಉಳುವವನೆ ಭೂಮಿ ಒಡೆಯ ಎಂಬ ಕಾನೂನನ್ನು ತಂದು ಎಲ್ಲಾ ವರ್ಗದವರ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದರು.
ಕೇAದ್ರ ಮತ್ತು ರಾಜ್ಯ ಸರ್ಕಾರಗಳು ಭ್ರಷ್ಟಾಚಾರದಲ್ಲಿ ತೊಡಗಿ ಹಿರಿಯ ಮುಖಂಡರಿಗೆ ವಿಕೃತ ಮನಸ್ಸು ಇರುವವರು ಸಿದ್ಧರಾಮುಲ್ಲಾ ಖಾನ್ ಎಂದು ಕರೆದಿದ್ದಾರೆ, ಸ್ಥಳಿಯ ಶಾಸಕರು ಅಭಿವೃದ್ಧಿ ಹೆಸರಿನಲ್ಲಿ ಕೊಳ್ಳೆ ಹೊಡೆದಿರುವ ಹಣವನ್ನು ಚುನಾವಣೆಯಲ್ಲಿ ಬಳಸುತ್ತಿದ್ದಾರೆ, ಹಣ, ಹೆಂಡ ಹಂಚಿ ವಾಮಮಾರ್ಗದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಮುಂದಾಗಿದೆ, ಈ ಚುನಾವಣೆಯಲ್ಲಿ ಸ್ಥಳಿಯ ಶಾಸಕರಿಗೆ ಮತ್ತು ಬಿಜೆಪಿ ಅವರಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಕಾAಗ್ರೆಸ್ ಮುಖಂಡ ಹೆಚ್.ಡಿ.ತಮ್ಮಯ್ಯ ಮಾತನಾಡಿ ಚಿಕ್ಕಮಗಳೂರಿನಲ್ಲಿ ಪ್ರಜಾ ಪ್ರಭುತ್ವ ಸತ್ತು ಹೋಗಿದೆ, ಪ್ರಜಾ ಪ್ರಭುತ್ವ ಉಳಿಯಬೇಕಾದರೆ ಮತದಾರರು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಮಾನ್ಯ ಜನರಿಗೆ ಅಗತ್ಯ ಇರುವ ದಿನ ನಿತ್ಯದ ಆಹಾರ ಪದಾರ್ಥಗಳು ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಏರಿಸಿರುವುದೇ ದೊಡ್ಡ ಸಾಧನೆ ಆಗಿದೆ, Àಸ್ಥಳಿಯ ಶಾಸಕರು ಮತ್ತು ಅವರ ಭಾವ ಅಭಿವೃದ್ಧಿ ಕೆಲಸಗಳಲ್ಲಿ ಕೊಳ್ಳೆ ಹೊಡೆದ ಹಣದಲ್ಲಿ ಈ ಬಾರಿ ರಾಜಕೀಯ ಮಾಡುತ್ತಿದ್ದಾರೆ, ಮತದಾರರು ಈ ಬಾರಿಯ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಮಾತನಾಡಿ ಹಿಂದುಳಿದ ವರ್ಗಗಳ ಪದಾಧಿಕಾರಿಗಳ ಪದಗ್ರಹಣ ಎನ್ನುವುದು ಪಕ್ಷ ಕಟ್ಟುವಂತಹ ಜವಾಬ್ದಾರಿಯುತ ಅಧಿಕಾರ, ರಾಜ್ಯದಲ್ಲಿ ಹೆಚ್ಚು ಹಿಂದುಳಿದ ವರ್ಗಗಳಿದ್ದು ಆ ವರ್ಗಕ್ಕೆ ಹೆಚ್ಚು ಒತ್ತನ್ನು ನೀಡಿದ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷ, ಇಂದಿಗೂ ಸಹ ನಗರವನ್ನು ನೊಡದೆ ಇರುವ ಗ್ರಾಮೀಣ ಭಾಗದ ಹಿಂದುಳಿದ ವರ್ಗಗಳು ಇದ್ದ ಜನರಿಗೆ ಅವರಿಗೆ ನಿರೀಕ್ಷೆಗು ಮೀರಿದ ಸೌಲಭ್ಯವನ್ನು ದೊರೆಯುವಂತೆ ಮಾಡಲಾಗಿದೆ, 5 ವಿಧಾನಸಭಾ ಕ್ಷೇತ್ರಲ್ಲಿಯೂ ಕಾಂಗ್ರೆಸ್‌ಗೆ ತಮ್ಮ ಮತಗಳನ್ನು ನೀಡುವುದರ ಮೂಲಕ ಬೆಂಬಲವನ್ನು ಕೊಡಬೇಕೆಂದರು, ನಮ್ಮ ಪಕ್ಷದ ನಾಯಕರ ತೀರ್ಮಾನಕ್ಕೆ ನಾವೆಲ್ಲರು ಬದ್ಧರಾಗಿ ಪಕ್ಷ ಕಟ್ಟುವ ಕೆಲಸವನ್ನು ಮಾಡಲಾಗುವುದು.
ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಡಿ.ಸಿ.ಪುಟ್ಟೇಗೌಡ ಮಾತನಾಡಿ 2013ರ ವೇಳೆಯಲ್ಲಿದ್ದ ಸಿದ್ಧರಾಮಯ್ಯ ರವರ ಸರ್ಕಾರವು 163 ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಎಲ್ಲಾ ವರ್ಗವನ್ನು ಸರಿಸಮಾನವಾಗಿ ಕಂಡಿದೆ, ದೇವರಾಜು ಅರಸು, ಬಂಗಾರಪ್ಪ, ಸಿದ್ಧರಾಮಯ್ಯ, ಮನಮೋಹನ್ ಸಿಂಗ್, ಜವಹರ್‌ಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ನರಸಿಂಹರಾವ್ ಸೇರಿದಂತೆ ಅನೇಕರು ಹಿಂದುಳಿದ ವರ್ಗಗಳಿಗೆ ಮೊದಲ ಪ್ರಾಮುಖ್ಯತೆಯನ್ನು ನೀಡಿದ್ದಾರೆ, ಆದರೆ ಇಂದು ಬಿಜೆಪಿ ಸರ್ಕಾರವು ಅಧಿಕಾರಕ್ಕಾಗಿ ವಾಮಮಾರ್ಗದಲ್ಲಿ ಜಾತಿ-ಜಾತಿಗಳ ಮದ್ಯೆ ವಿಷ ಬಿತ್ತುವ ಕೆಲಸವನ್ನು ಮಾಡುತ್ತಿದ್ದಾರೆ, 40% ಸರ್ಕಾರ ಇಂದಿಗೆ ಕೊನೆಯಾಗಬೇಕು, ಕಾಂಗ್ರೆಸ್ ಸರ್ಕಾರ ಇದ್ದ ದಿನಗಳಲ್ಲಿ 50 ರೂಗಳಿಗೆ ಪಾನ್‌ಕಾರ್ಡ್ಗಳನ್ನು ನೀಡಲಾಗುತ್ತಿತ್ತು ಆದರೆ ಬಿಜೆಪಿ ಸರ್ಕಾರ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಲು 1 ಸಾವಿರ ರೂಪಾಯಿಗಳನ್ನು ಪಡೆಯಲಾಗುತ್ತಿದೆ, ಜನರು ಈ ವಿಚಾರದ ಬಗ್ಗೆ ಆಲೋಚಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಕೆ.ಮಹಮದ್, ಎಸ್.ಇ/ಎಸ್.ಟಿ ವಿಭಾಗದ ಜಿಲ್ಲಾಧ್ಯಕ್ಷ ಮಲ್ಲೇಶ್ ಸ್ವಾಮಿ, ರಾಜ್ಯ ಉಪಾಧ್ಯಕ್ಷ ದೇವಾನಂದ್, ರಾಜ್ಯ ಕಾರ್ಯದರ್ಶಿ ಪ್ರಶಾಂತ್, ಸೇವಾದಳ ಜಿಲ್ಲಾಧ್ಯಕ್ಷ ಬಸವರಾಜ್ ಜಯರಾಜ್ ಅರಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!