May 14, 2024

MALNAD TV

HEART OF COFFEE CITY

ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಮುಷ್ಕರ…!

1 min read

ಚಿಕ್ಕಮಗಳೂರು: ಗ್ರಾಮೀಣ ಅಂಚೆ ಸೇವಕರಿಗೆ ನೀಡಬೇಕಾದ ಸರ್ಕಾರದ ಎಲ್ಲ ಸವಲತ್ತುಗಳನ್ನು ನೀಡಬೆಕೆಂದು ಒತ್ತಾಯಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘವು ಮುಷ್ಕರ ಕೈಗೊಂಡರು.ಚಿಕ್ಕಮಗಳೂರು ವಿಭಾಗದ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕ ಸಂಘದ ಆಶ್ರಯದಲ್ಲಿ ಇಂದು ನಗರದ ಪ್ರದಾನ ಅಂಚೆ ಕಚೇರಿಯ ಆವರಣದಲ್ಲಿ, ಅಂಚೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗುವುದರ ಮೂಲಕ ಸಾಂಕೇತಿಕ ಮುಷ್ಕರ ಮಾಡಿ ಸರ್ಕಾರಕ್ಕೆ ಮನವಿ ಮಾಡಿದರು.
ಕೇಂದ್ರ ಸರಕಾರ ನೀಡುತ್ತಿರುವ ಗಂಟೆಯಾಧರಿತ ವೇತನ ರದ್ದುಗೊಳಿಸಿ, ಇಲಾಖೆ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ವಿಸ್ತರಿಸಬೇಕು. ರಜೆ, ನಿವೃತ್ತಿ ವೇತನ, ಬಡ್ತಿ, ಪಿಂಚಣಿ ಇತ್ಯಾದಿ ಭತ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿದರು. ಅಷ್ಟೇ ಅಲ್ಲದೆ ಗ್ರಾಮೀಣ ಅಂಚೆ ನೌಕರರನ್ನು ಖಾಯಂಗೊಳಿಸಬೇಕು. ಅಂಚೆ ನೌಕರರಿಗೆ ಪಿಂಚಣಿ ಸೌಲಭ್ಯ, ಗುಂಪು ವಿಮೆ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಿಸಬೇಕು. ಕಾರ್ಮಿಕರಿಗೆ ವೈದ್ಯಕೀಯ ಸವಲತ್ತುಗಳನ್ನು ಕಲ್ಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕ ಸಂಘ ಚಿಕ್ಕಮಗಳೂರು ವಿಭಾಗದ ಅಧ್ಯಕ್ಷ ಚಂದ್ರ ಪ್ರಕಾಶ್ ಮಾತನಾಡಿ, ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸುತ್ತದೆ ಎಂಬ ಉದ್ದೇಶದಿಂದ ಕೇವಲ ಒಂದು ದಿನದ ಸಾಂಕೇತಿಕ ಮುಷ್ಕರ ಮಾಡಿದ್ದೇವೆ ಹೀಗೆ ಮುಂದುವರೆದರೆ ಅನಿರ್ದಿಷ್ಟಾವಧಿ ಮುಷ್ಕರವನ್ನು ಡಿಸೆಂಬರ್ ನಲ್ಲಿ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ, ಹನುಮಂತಪ್ಪ, ಖಜಾಂಚಿ ಭರತ್, ಸಹ ಖಜಾಂಚಿ, ಹರ್ಷರಾಜ್ ಅರಸ್, ಸದಸ್ಯರಾದ ರಾಕೇಶ್, ಆಕಾಶ್, ಮದನ್, ಲಾವಣ್ಯ, ಯಶಸ್ವಿನಿ ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!