May 15, 2024

MALNAD TV

HEART OF COFFEE CITY

ಅಂಬೇಡ್ಕರ್ 67ನೇ ಪರಿನಿವಾ೯ಣ ದಿನ: ಪುತ್ಥಳಿಗೆ ಮಾಲಾಪ೯ಣೆ ಮಾಡಿ ಗೌರವ ಅರ್ಪಣೆ

1 min read

ಚಿಕ್ಕಮಗಳೂರು: ಜಿಲ್ಲಾಡಳಿತ ವತಿಯಿಂದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 67ನೇ ಪರಿನಿವಾ೯ಣ ದಿನವನ್ನು ನಗರದ ಜಿಲ್ಲಾ ಪಂಚಾಯತಿ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾಪ೯ಣೆ ಮಾಡುವ ಮೂಲಕ ಗೌರವ ಅರ್ಪಿಸಲಾಯಿತು.

ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಇರುವ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ ಬೃಹತ್ ಪುತ್ಥಳಿಗೆ ಪುಷ್ಪ ಸಮರ್ಪಣೆ ಮೂಲಕ ಬಿ.ಆರ್ ಅಂಬೇಡ್ಕರ್ ರವರ 67 ನೇ ಮಹಾ ಪರಿನಿಬ್ಬಾಣ ದಿನವನ್ನು ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.  ಇದೇ ವೇಳೆ ಹಲವು ದಲಿತಪರ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ರವರ ಜಯಘೋಷ ಇದೇ ವೇಳೆ ಮೊಳಗಿತು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರ ಆಶಯಗಳು ಈಡೇರಲಿ ಎಂದು ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!