May 15, 2024

MALNAD TV

HEART OF COFFEE CITY

ಆಂಬುಲೆನ್ಸ್-ಆಟೋ ಮುಖಾಮುಖಿ ಡಿಕ್ಕಿ, ಗಾಡಿ ಜಖಂ, ನಾಲ್ವರು ಪ್ರಾಣಾಪಾಯದಿಂದ ಪಾರು

1 min read

ರೋಗಿಯನ್ನ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಆಟೋದಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ಮೂಲದ ರೋಗಿಯನ್ನ ಮಂಗಳೂರು ಆಸ್ಪತ್ರೆಯಿಂದ ಮೂಡಿಗೆರೆ ಬಂದು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್ ಹಾಗೂ ಧರ್ಮಸ್ಥಳಕ್ಕೆ ಹೋಗಿ ದೇವರ ದರ್ಶನ ಮಾಡಿಕೊಂಡು ಬರುತ್ತಿದ್ದ ಆಟೋ ಚಾರ್ಮಾಡಿಯ ಒಂದನೇ ತಿರುವಿನಲ್ಲಿ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ನಾಲ್ವರನ್ನ ಬೆಳ್ತಂಗಡಿಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಟೋ ಮೂಲತಃ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ್ದಾಗಿದೆ. ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳು ಜಖಂ ಆಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!