May 10, 2024

MALNAD TV

HEART OF COFFEE CITY

ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ವೃದ್ಧೆ ಬಲಿ

1 min read

 

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭತ್ತದ ಗದ್ದೆಗೆ ತೆರಳುವಾಗ ಕಾಲು ಜಾರಿ ನದಿಗೆ ಬಿದ್ದು ವೃದ್ಧೆ ಸಾವನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೇಮಾವತಿ ನದಿ ರಭಸವಾಗಿ ಹರಿಯುತ್ತಿದ್ದ ಪರಿಣಾಮ ವೃದ್ಧೆ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.ದಾರದಹಳ್ಳಿ ಗ್ರಾಮದ 61 ವರ್ಷದ ದೇವಮ್ಮ ಮೃತರು ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಗದ್ದೆಗೆ ತೆರಳುವಾಗ ನದಿಗೆ ಕಾಲು ಜಾರಿ ಬಿದಿದ್ದ ವೃದ್ಧೆ, ಧಾರಾಕಾರ ಮಳೆಯಿಂದ ಹೇಮಾವತಿ ನದಿ ತುಂಬಿ ಹರಿಯುತ್ತಿದೆ. ಈ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!