May 18, 2024

MALNAD TV

HEART OF COFFEE CITY

ಕಾಡಾನೆ ದಾಳಿಗೆ ಮತ್ತೋರ್ವ ಕಾಫಿ ತೋಟದ ಕೂಲಿ ಕಾರ್ಮಿಕ ಬಲಿ

1 min read

 

ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊರ್ವ ಕಾಫಿ ತೋಟದ ಕೂಲಿ ಕಾರ್ಮಿಕ ಮೃತಪಟ್ಟಿದ್ದಾನೆ. ಆಲ್ದೂರು ಸಮೀಪದ ಕೆಸುವಿನ ಹಕ್ಲು ಎಂಬಲ್ಲಿ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಆನಂದ ಪೂಜಾರಿ ಎಂಬಾತ ಕಾಡಾನೆ ದಾಳಿಗೆ ಬಲಿಯಾಗಿದ್ದಾನೆ.

ಚಿಕ್ಕಮಗಳೂರು ತಾಲೂಕು ಆಲ್ಲೂರು ಸಮೀಪದ ಕಂಚಿನಕಲ್ ದುರ್ಗದ ಬಳಿ ಕೂಲಿ ಕಾರ್ಮಿಕರೊಬ್ಬರನ್ನು ಕಾಡಾನೆ ತುಳಿದು ಸಾಯಿಸಿದೆ. ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಫಿ ಎಸ್ಟೇಟ್ ನಲ್ಲಿ ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ.
ಕೂಲಿ ಕಾರ್ಮಿಕ ಆನಂದ ಪೂಜಾರಿ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದು ಮುಂಜಾನೆ ಅವರು ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು ಕಾಡಾನೆ ದಾಳಿಯಿಂದ ಆನಂದ ಪೂಜಾರಿಯವರು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ನೂ‌ರ್ ಅಹಮ್ಮದ್ ಎಂಬುವರಿಗೆ ಸೇರಿದ ಕೆಸುವಿನಕಲ್ ಎಸ್ಟೇಟ್ ನಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತ ಆನಂದ ಪೂಜಾರಿಯವರು ಹಲವು ವರ್ಷಗಳಿಂದ ಈ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಮತ್ತು ಸ್ಥಳೀಯ ಗ್ರಾ.ಪಂ.ಸದಸ್ಯ ರಾಜು ಪೂಜಾರಿ ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ
ಕಾಫಿನಾಡಿನಲ್ಲಿ ಕಾಡಾನೆ ದಾಳಿಗೆ ನಿರಂತರವಾಗಿ ಜೀವ ಹಾನಿಯಾಗುತ್ತಿದ್ದು ಈಗ ಮತ್ತೊಂದು ಅಮಾಯಕ ಜೀವ ಬಲಿಯಾಗಿದೆ.
ಇತ್ತೀಚೆಗೆ ಕೆಲ ತಿಂಗಳ ಹಿಂದೆ ಆಲ್ಲೂರು ಭಾಗದಲ್ಲಿ  ಇಬ್ಬರನ್ನು ಕಾಡಾನೆ ತುಳಿದು ಸಾಯಿಸಿತ್ತು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!