April 27, 2024

MALNAD TV

HEART OF COFFEE CITY

ಚಿನ್ನಕ್ಕಿಂತ ದುಬಾರಿಯಾದ ಡ್ರಗ್ಸ್ ಮಾರುತ್ತಿದ್ದವನ ಬಂಧನ

1 min read

ಚಿನ್ನಕ್ಕಿಂತ ದುಬಾರಿಯಾದ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನ ಬಂಧಿಸುವಲ್ಲಿ ಸಿಇಎನ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ನಗರದ ಪವಿತ್ರ ವನದ ಉದ್ಯಾನವನದ ಎದುರು ನಿಷೇಧಿತ ಮಾದಕ ವಸ್ತು ಎಂ ಡಿ ಎಂ ಎ ಗ್ರಸ್ಟಲ್ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾರಿನಲ್ಲಿ ಮಾದಕ ವಸ್ತು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಮಹಮ್ಮದ್ ಜರ್ತಾಬ್ ಎಂಬ ಆರೋಪಿಯನ್ನ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಆದಿಲ್ @ ಗಾಂಜಾ ಶಬ್ಬೀರ್ ಪರಾರಿಯಾಗಿದ್ದು ಆತನಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ. ಬಂಧಿತ
ಆರೋಪಿಯಿಂದ 1 ಲಕ್ಷ ಬೆಲೆ ಬಾಳುವ 12 ಗ್ರಾಂ ಡ್ರಗ್ಸ್ , ಒಂದು ಟಯೋಟಾ ಕಾರ್, ಒಂದು ಬೈಕ್ ಮತ್ತು ಒಂದು ಮೊಬೈಲ್ ಫೋನ್ ನ್ನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ. ಈ ಸಂಬಂಧ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ‌‌..

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!