April 29, 2024

MALNAD TV

HEART OF COFFEE CITY

ಬಿ.ಬಿ. ನಿಂಗಯ್ಯ ಬದಲಾವಣೆ ಇಲ್ಲ

1 min read

ಚಿಕ್ಕಮಗಳೂರು : ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯ ಬದಲಾವಣೆ ಮಾಡುವ ಬಗ್ಗೆ ಪ್ರಕಟವಾಗಿರುವ ಸುದ್ದಿಗೂ ಜೆ.ಡಿ.ಎಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಜೆ.ಡಿ.ಎಸ್. ಪಕ್ಷದ ಅಂಬಳೆ ಹೋಬಳಿ ಘಟಕದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆ.ಡಿ.ಎಸ್. ಪಕ್ಷದ ಅಂಬಳೆ ಹೋಬಳಿ ಘಟಕದ ಪದಾಧಿಕಾರಿಗಳು ಇತ್ತಿಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಜೆ.ಡಿ.ಎಸ್ ಪಕ್ಷದ ಹೆಸರಿನಲ್ಲಿ ಅನಧಿಕೃತ ಸಭೆ ನಡೆಸಿ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಜೆ.ಡಿ.ಎಸ್. ಪಕ್ಷದ ಅಭ್ಯರ್ಥಿ ಬಿ.ಬಿ. ನಿಂಗಯ್ಯರವರನ್ನು ಬದಲಾವಣೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದಕ್ಕೂ ಜೆ.ಡಿ.ಎಸ್. ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ನಮ್ಮ ಜೆ.ಡಿ.ಎಸ್. ಪಕ್ಷದ ನಾಯಕರಾದ ಬಿ.ಬಿ. ನಿಂಗಯ್ಯರವರು ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿದ್ದು, ಅವರಿಗೆ ನಮ್ಮ ಬೆಂಬಲವಿದ್ದು, ಅವರ ಬದಲಾವಣೆ ಇಲ್ಲ ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!