May 9, 2024

MALNAD TV

HEART OF COFFEE CITY

ಕಾಂಗ್ರೆಸ್ಸಿಗೆ ಇನ್ನು ಮುಂದೆ ಚೆಂಡು ಹೂವೇ ಶಾಶ್ವತ : ಸಿ.ಟಿ.ರವಿ ವ್ಯಂಗ್ಯ

1 min read

 

ಚಿಕ್ಕಮಗಳೂರು. ಕಾಂಗ್ರೆಸ್ಸಿಗರಿಗೆ ಇನ್ಮು ಮುಂದೆ ಚೆಂಡ ಹೂವೇ ಪರಮನೆಂಟ್, ಇನ್ನು ಮುಂದೆ ಅವರು ಕಿವಿಗೆ ಚೆಂಡು ಹೂವು ಇಟ್ಟುಕೊಂಡೇ ಓಡಾಡಬೇಕು ಎಂದು ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಬಜೆಟ್ ಬಳಿಕ ನಗರದ ಬಸವನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದರು. ಬಜೆಟ್ ವಿರುದ್ಧ ಕಾಂಗ್ರೆಸ್ ಕಿವಿಗೆ ಹೂವಿಟ್ಟು ಪ್ರತಿಭಟನೆ ನಡೆಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ. ರಾಜ್ಯದಲ್ಲಿ ಕಮಲವೇ ಮತ್ತೆ ಅರಳುವುದು.‌ ಜನ ಕಾಂಗ್ರೆಸ್ಸಿಗೆ ಚೆಂಡುಹೂವು ಹಿಡಿಸುವ ಬದಲು, ನಾವೇ ಇಟ್ಟುಕೊಳ್ಳೋಣ ಎಂದು ಕಿವಿಗೆ ಇಟ್ಟುಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಕರ್ನಾಟಕದಲ್ಲಿ ಮತ್ತೆ ಬಿಜೆಪಿಯೇ ಗೆಲ್ಲುವುದು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದಿದ್ದಾರೆ. ಕಾಂಗ್ರೆಸ್ಸಿಗರು ಕಿವಿಗೆ ಚೆಂಡು ಹೂವುನ್ನ ಇಟ್ಟುಕೊಂಡು ರಾಜ್ಯದ ಜನತೆಯ ಹಿತವನ್ನು ಬಯಸಿದ್ದಾರೆ.ರಾಜ್ಯದ ಹಿತವೂ ಬಿಜೆಪಿಯ ಗೆಲುವಿನ ಜೊತೆಗಿದೆ. ಕಾಂಗ್ರೆಸ್ ರಾಜ್ಯದ ಹಿತ ಹಾಗೂ ಬಿಜೆಪಿಯ ಗೆಲುವನ್ನು ಬಯಸಿದ್ದಕ್ಕೆ ಕಾಂಗ್ರೆಸ್ಸಿಗೆ ಧನ್ಯವಾದ ತಿಳಿಸಿದ್ದಾರೆ.

ಇನ್ನು ಬಜೆಟ್ ಬಗ್ಗೆ ಮಾತನಾಡಿದ ಅವರು, ಬೊಮ್ಮಾಯಿ ಬಜೆಟ್ ಜನರಲ್ಲಿ ಹೊಸ ಆಶಯ ಬಿಂಬಿಸುವ ಬಜೆಟ್. ಇದೊಂದು ಸರ್ವಸ್ಪರ್ಶಿ, ಸರ್ವವ್ಯಾಪಿಯಾಗಿರುವ ಬಜೆಟ್ ಎಂದು ಬಣ್ಣಿಸಿದ್ದಾರೆ. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಗೃಹಿಣಿ ಶಕ್ತಿ ಯೋಜನೆ, ಮೂಲ ಸೌಲಭ್ಯ, ನೀರಾವರಿಗೆ ಕೊಟ್ಟಿರುವ ವಿಶೇಷ ಯೋಜನೆ ಜನರಲ್ಲಿ ಹೊಸ ಭರವಸೆ ಮೂಡಿಸಿದೆ ಎಂದರು. ಚಿಕ್ಕಮಗಳೂರಿಗೂ ಜವಳಿ ಪಾರ್ಕ್, ಶೃಂಗೇರಿಗೆ 100 ಬೆಡ್ ಹಾಸಿಗೆಯುಳ್ಳ ಆಸ್ಪತ್ರೆ, ಕಾಫಿನಾಡಿಗೆ ನೂತನ ವಿಶ್ವವಿದ್ಯಾನಿಲಯ ವಿವಿಧ ಯೋಜನೆ ನೀಡಿದೆ. ಇದು ಅಭಿವೃದ್ಧಿ ಕರ್ನಾಟಕದ ಆಶಯದ ಬಜೆಟ್ ಎಂದು ವರ್ಣಿಸಿದ್ದಾರೆ. ಅದರೆ, ನಮಗೊಂದು ನೋವಿದೆ. ದತ್ತಪೀಠ ಅಭಿವೃದ್ಧಿ ಪ್ರಾಧಿಕಾರ ಮಾಡಿ ಅಂತ ಕೇಳಿಕೊಂಡಿದ್ದೆ. ಅದರಲ್ಲಿರುವ ತಾಂತ್ರಿಕ ತೊಡಕಿನ ಬಗ್ಗೆ ನನಗೆ ಪೋನ್ ಮಾಡಿ ತಿಳಿಸಿದ್ದಾರೆ.‌ ದತ್ತಪೀಠ ಅಭಿವೃದ್ಧಿ ಪ್ರಾಧಿಕಾರಕ್ಕೆ ಇರುವ ತಾಂತ್ರಿಕ ತೊಡಕು ನಿವಾರಿಸಿ ದತ್ತಪೀಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿಸುತ್ತೇವೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!