May 1, 2024

MALNAD TV

HEART OF COFFEE CITY

ಬಾರ್ ಬೀಗ ಮುರಿದ ಖದೀಮರು, ಎಣ್ಣೆ ಮುಟ್ಟದೇ ವಾಪಾಸ್

1 min read

 

ಮೂಡಿಗೆರೆ: ತಾಲೂಕಿನ ಬಣಕಲ್ ಪಟ್ಟಣದಲ್ಲಿ ಬಾರ್ ಬೀಗ ಹೊಡೆದು ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.ಬಣಕಲ್ ನ ಸಂಭ್ರಮ್ ಬಾರ್ ನಲ್ಲಿ ಈ ಘಟನೆ ನಡೆದಿದ್ದು ಬಾರ್ ನ ಮುಂಬಾಗಿಲ ಬೀಗ ಮುರಿದು ಕಳ್ಳರು ಬಾರ್ ದೋಚಲು ಯತ್ನಿಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಸೋಮವಾರ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಬಾರ್ ಗೆ ಲಗ್ಗೆ ಇಟ್ಟ ಕಳ್ಳರು ಬಾರ್ ನಲ್ಲಿ ಹಣ ದೊರೆಯದೆ ಮದ್ಯವನ್ನು ಮುಟ್ಟದೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಘಟನೆಯ ಕುರಿತಾಗಿ ಮೂಡಿಗೆರೆಯ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!