May 2, 2024

MALNAD TV

HEART OF COFFEE CITY

ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ನಾಲ್ವರು ಆತ್ಮಹತ್ಯೆ ಯತ್ನ

1 min read

 

 

 

ಚಿಕ್ಕಮಗಳೂರು.ಆ.26: ಜೀವನದಲ್ಲಿ ಮಾನಸಿಕವಾಗಿ ನೊಂದಿದ್ದೇವೆ ಎಂದು ವಾಯ್ಸ್ ಮೆಸೇಜ್ ಕಳಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಮಳಲಿ ಚನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹಳೇಜೇಡಿಕಟ್ಟೆ ಗ್ರಾಮದವರು ಎಂದು ಗುರುತಿಸಲಾಗಿದೆ. ಮೂಲತಃ ಭದ್ರಾವತಿ ತಾಲೂಕಿನ ಹಳೇ ಜೇಡಿಕಟ್ಟೆ ಮೂಲದ ನೀತುರನ್ನ ಬೆಂಗಳೂರಿಗೆ ಮದುವೆ ಮಾಡಿಕೊಟ್ಟಿದ್ದರು. ದಂಪತಿಗೆ 13 ವರ್ಷದ ಧ್ಯಾನ್ ಎಂಬ ಮಗುವಿದೆ. ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ಮಂಜು, ನೀತು, ಧ್ಯಾನ್ ಹಾಗೂ ಮಂಜು ತಾಯಿ ಸುನಂದಮ್ಮ ನಾಲ್ವರು ಸ್ವಿಫ್ಟ್ ಕಾರಿನಲ್ಲಿ ಬಂದು ಮಳಲಿ ಚನ್ನೇನಹಳ್ಳಿ ಬಳಿ ಭದ್ರಾ ನಾಲೆಗೆ ಕಾರಿನ ಸಮೇತ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. 35 ವರ್ಷದ ನೀತು ಹಾಗೂ 13 ನೀತು ಮಗು ಸಾವಿನಿಂದ ಪಾರಾಗಿದ್ದಾರೆ. ಆದರೆ, ಮಂಜು ಹಾಗೂ ಮಂಜು ತಾಯಿ ಸುನಂದಮ್ಮ ಪತ್ತೆಯಾಗಿಲ್ಲ. ವೇಗವಾಗಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ಅಕ್ಷಯ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ತರೀಕೆರೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ನಾಪತ್ತೆ ಆದವರಿಗಾಗಿ ಹುಟುಕಾಟ ಆರಂಭಿಸಿದ್ದಾರೆ. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!