May 5, 2024

MALNAD TV

HEART OF COFFEE CITY

ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಹರಿದು ಬಂದ ಭಕ್ತಸಾಗರ

1 min read

ಚಿಕ್ಕಮಗಳೂರಿನ ಅಧಿದೇವತೆ ಬೆಟ್ಟದ ತುದಿಯಲ್ಲಿ ನೆಲೆಸಿರುವ ದೇವಿರಮ್ಮನ ದರ್ಶನಕ್ಕಾಗಿ ಸಹಸ್ರಾರು ಸಂಖ್ಯೆಯಲ್ಲಿ ನಾಡಿನೆಲ್ಲೆಡೆಯಿಂದ ತಂಡೋಪ ತಂಡವಾಗಿ ಭಕ್ತರು ಆಗಮಿಸುತ್ತಿದ್ದಾರೆ.ವರ್ಷಕ್ಕೆ ಒಮ್ಮೆ ಮಾತ್ರ ಭಕ್ತರಿಗೆ ದರ್ಶನದ ನೀಡೋ ದೇವೇರಮ್ಮ ತಾಯಿಯ ದರ್ಶನಕ್ಕಾಗಿ ಬರಿಗಾಲಲ್ಲೇ ಕಳೆದ ರಾತ್ರಿಯಿಂದಲೂ ಬೆಟ್ಟ ಹತ್ತಿ, ದೇವರ ದರ್ಶನ ಮಾಡುತ್ತಿದ್ದಾರೆ, ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರಿಂದ ದೇವರ ದರ್ಶನ ಪಡೆಯುವ ನಿರೀಕ್ಷೆ ಇದ್ದು 3 ಸಾವಿರ ಅಡಿಗಳ ಅಡಿ ಎತ್ತರವಿರುವ ಬೆಟ್ಟದ ಮೇಲೆ ನೆಲೆಸಿರುವ ದೇವಿರಮ್ಮನ ದರ್ಶನಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ಬಂದಿರುವ ಭಕ್ತರು ಕಿರಿದಾದ ರಸ್ತೆಯ ಮೂಲಕ ಬೆಟ್ಟ ಹತ್ತುತ್ತಿದ್ದಾರೆ, ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿರುವ ಬಿಂಡಿಗಾ ದೇವಿರಮ್ಮ ಬೆಟ್ಟಕ್ಕೆ ಹರಿದು ಬಂದಿರುವ ಭಕ್ತರ

 

ಸುಗಮ ಸಂಚಾರಕ್ಕೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ದೀಪಾವಳಿ ಅಂಗವಾಗಿ ದೇವರಿಗೆ ಮೂರು ದಿನಗಳ ಕಾಲ ವಿಶೇಷ ಪೂಜೆ ನಡೆಯಲಿದೆ. ಬೆಟ್ಟದ ಮೇಲೆ ನೆಲೆಸಿರುವ ದೇವರ ದರ್ಶನ ಪಡೆದು ಪುನೀತರಾಗುತ್ತಿರುವ ಭಕ್ತರು ಇಡೀ ಬೆಟ್ಟದ ತುಂಬೆಲ್ಲ ಜನವೋ ಜನರೇ ಕಾಣುತ್ತಿದ್ದು ಸಂಪೂರ್ಣವಾಗಿ ಬೆಟ್ಟವನ್ನು ಆವರಿಸಿದಂತೆ ಗೋಚರಿಸುತ್ತಿದೆ. ಇಡೀ ರಾತ್ರಿ ಬರಿಗಾಲಲ್ಲಿ ಬೆಟ್ಟ ಹತ್ತುತ್ತಿರುವ ಭಕ್ತ ಸಾಗರ ಈಗಾಗಲೇ ವಾಪಾಸ್ಸಾಗುತ್ತಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಸಹಾ ನಿಯೋಜಿಸಲಾಗಿದೆ. ಮಲ್ಲೇನಹಳ್ಳಿ ಬಿಂಡಿಗ ದೇವೀರಮ್ಮ ದೇಗುಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನಗಳ ದಟ್ಟಣೆಯೂ ವಿಪರೀತವಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!