ಭೀಮಾ ಕೊರೇಗಾಂವ್ ವಿಜಯೋತ್ಸವ : ಮದ್ಯ ಮಾರಾಟ ನಿಷೇಧ
1 min read
ನಾಳೆ ನಗರದಲ್ಲಿ ಭೀಮ ಕೊರೆಂಗಾವ್ ವಿಜಯೋತ್ಸವ ರ್ಯಾಲಿ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಇಪ್ಪತ್ತು ಸಾವಿರ ಜನರು ಆಗಮಿಸುವ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ವರೆಗೆ ಚಿಕ್ಕಮಗಳೂರು ನಗರ ಹಾಗೂ ಬಸವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸುತ್ತಮುತ್ತಲಿನ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮಧ್ಯ ಮಾರಾಟ ಶೇಖರಣೆ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಿ.ಎನ್ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಕರ್ನಾಟಕ ಅಬಕಾರಿ ಅಧಿನಿಯಮ 1965 ವಿಧಿ 21 ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ ದಿನಾಂಕ 8.5 2025ರ ಬುಧವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11ವರೆಗೆ ನಗರದ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನಮೂನೆಯ ಮಧ್ಯದ ಅಂಗಡಿಗಳನ್ನು ಮುಚ್ಚುವಂತೆಯೂ ಹಾಗೂ ಅಬಕಾರಿ ಪದಾರ್ಥಗಳ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಸಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g

