May 5, 2024

MALNAD TV

HEART OF COFFEE CITY

ಬಿಂಡಿಗ ದೇವಿರಮ್ಮ ದೀಪೋತ್ಸವ ಕ್ಷಣಗಣನೆ..!

1 min read

ಚಿಕ್ಕಮಗಳೂರು: ಜಿಲ್ಲೆಯ ಮಲ್ಲೇನಹಳ್ಳಿ ಬಿಂಡಿಗ ದೇವಿರಮ್ಮ ದೇವಸ್ಥಾನದಲ್ಲಿ ನ.12 ರಿಂದ 15 ರವರೆಗೆ ದೀಪೋತ್ಸವದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನ. 12 ರಂದು ಬೆಳಿಗ್ಗೆ ಶ್ರೀ ದೇವೀರಮ್ಮನ ಬೆಟ್ಟದಲ್ಲಿ ಅಭಿಷೇಕ ನಡೆಯಲಿದ್ದು, ನಂತರ ಪೂಜಾ ಕಾರ್ಯ ಪ್ರಾರಂಭವಾಗಲಿದೆ. ರಾತ್ರಿ 7 ಗಂಟೆಗೆ ದೀಪೋತ್ಸವ ನಡೆಯಲಿದೆ. ನ. 12 ರಂದು ಬೆ.10 ಗಂಟೆಗೆ ಶ್ರೀ ದೇವೀರಮ್ಮನವರ ದೇವಸ್ಥಾನದಲ್ಲಿ ಶ್ರೀ ದೇವಿಯವರಿಗೆ ಉಡುಗೆ, ಪೂಜೆ, ಸಂಜೆ ಬೆಣ್ಣೆ ಬಟ್ಟೆ ಸುಡುವುದು, ಮಂಗಳಾರತಿ ಪ್ರಸಾದ ವಿನಿಯೋಗ ನಡೆಯಲಿದೆ. ನ. 14 ರಂದು ರಾತ್ರಿ ಶ್ರೀ ದೇವಿಯವರ ಸನ್ನಿಧಿಯಲ್ಲಿ ಶ್ರೀ ಮಹಾಗಣಪತಿ ಪೂಜೆ, ಪುಣ್ಯಾಹ, ಅಗ್ನಿಕುಂಡ ಪೂಜೆ, ಕಳಸ ಸ್ಥಾಪನೆ, ಕುಂಕುಮಾರ್ಚನೆ ಇತ್ಯಾದಿ ಪೂಜೆ ನಡೆಯಲಿದೆ. ನವೆಂಬರ್ 15 ರಂದು ಸೂರ್ಯೋದಯಕ್ಕೆ ಕೆಂಡರ್ಚಾನೆ ನಂತರ ಮಹಾಮಂಗಳಾರತಿ, ಹರಕೆ ಒಪ್ಪಿಸುವುದು, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

ಭಕ್ತಾಧಿಗಳಿಗೆ ವಿಶೇಷ ಸೂಚನೆ:-

  • ಬೆಟ್ಟದ ಮೇಲೆ ತೆಂಗಿನಕಾಯಿ ಒಡೆಯುವುದನ್ನು ನಿಷೇಧಿಸಲಾಗಿದೆ. ಇದೇ ದಿನ ದೇವೀರಮ್ಮನವರ ದೇವಸ್ಥಾನದಲ್ಲಿ ಹಣ್ಣು ಕಾಯಿಯನ್ನು ಮಾಡಿಸಬಹುದು. ದೇವಸ್ಥಾನದಲ್ಲಿ ಹಣ್ಣು ಕಾಯಿ ಮತ್ತು ತೀರ್ಥ-ಪ್ರಸಾದ ದೊರೆಯುತ್ತದೆ.
  • ಭಕ್ತರು ಪಾದರಕ್ಷೆಗಳನ್ನು ಧರಿಸದೇ ಬರೀಕಾಲಿನಲ್ಲಿಯೇ ಬೆಟ್ಟ ಹತ್ತುವುದು. ದೇವಿಯವರ ದರ್ಶನವಾದ ತಕ್ಷಣ ಬೆಟ್ಟದ ಮೇಲೆಯೇ ಕುಳಿತುಕೊಳ್ಳದೇ ಬೆಟ್ಟದಿಂದ ಕೆಳಗೆ ಇಳಿಯತಕ್ಕದ್ದು.
  • ಬೆಟ್ಟದಲ್ಲಿ ಹಾಗೂ ದೇವಸ್ಥಾನದ ಸುತ್ತ-ಮುತ್ತ ಪ್ಲಾಸ್ಟಿಕ್ ಇತ್ಯಾದಿ ತ್ಯಾಜ್ಯ ವಸ್ತುಗಳನ್ನು ಎಸೆಯಬೇಡಿ – ಬೆಟ್ಟದಲ್ಲಿ ಹಾಗೂ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
  • ತರೀಕೆರೆ, ಬೀರೂರು, ಕಡೂರು, ಚಿಕ್ಕಮಗಳೂರಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ವ್ಯವಸ್ಥೆ ಇರುತ್ತದೆ. ಪ್ರತಿದಿನ ಅನ್ನ ದಾಸೋಹ ಇರುತ್ತದೆ. ಅನ್ನದಾಸೋಹ ಮಾಡಿಸುವವರು ದೇವಸ್ಥಾನದ ಕಾರ್ಯಾಲಯದಲ್ಲಿ ಹೆಸರು ನೊಂದಾಯಿಸಬಹುದು. ಬೆಟ್ಟದ ಮೇಲೆ ಪಟಾಕಿ ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಈ ಬಾರಿ ಜಿಲ್ಲೆಯಲ್ಲಿ ಮಳೆ ಕೂಡ ಕಡಿಮೆಯಾಗಿದ್ದು, ಮಳೆ ವಾತಾವರಣ ಕೂಡ ಇಲ್ಲದೆ ಇರುವ ಹಿನ್ನಲೆ ದೇವಿರಮ್ಮ ಬೆಟ್ಟ ಏರಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ತಹಸೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!